ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಅಜಂ ಖಾನ್ ವಿರುದ್ಧ ಪ್ರಕರಣ ದಾಖಲು

Last Updated 3 ಡಿಸೆಂಬರ್ 2022, 7:12 IST
ಅಕ್ಷರ ಗಾತ್ರ

ಲಖನೌ: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ರಾಂಪುರ ಸದರ್‌ ವಿಧಾನಸಭೆ ಕ್ಷೇತ್ರಕ್ಕೆ ಡಿಸೆಂಬರ್‌ 5ರಂದು ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಖಾನ್ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ಆಸಿಂ ರಾಜಾ ಮತ್ತು ಅಜಂ ಖಾನ್‌ ಅವರು ನವೆಂಬರ್29ರಂದು ನಡೆದ ಸಭೆಯಲ್ಲಿ ಮಾತನಾಡಿದ್ದರು. ಈ ವೇಳೆ ಅಜಂ ಖಾನ್ ನೀಡಿದ ಹೇಳಿಕೆಗೆ ಕೆಲವು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರು ಎಂದುವೃತ್ತಾಧಿಕಾರಿ (ನಗರ) ಅನೂಜ್ ಚೌಧರಿ ಹೇಳಿದ್ದಾರೆ.

ಗುರುವಾರ ಗಂಜ್‌ ಠಾಣೆಗೆ ಆಗಮಿಸಿದ್ದಮಹಿಳೆಯರು,ಖಾನ್‌ ಹೇಳಿಕೆಯ ಆಡಿಯೊ ಕ್ಲಿಪ್‌ ಅನ್ನು ನೀಡಿ ದೂರು ದಾಖಲಿಸಿದ್ದರು.ಈ ಸಂಬಂಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆಎಂದೂ ತಿಳಿಸಿದ್ದಾರೆ.

2019ರ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವುಖಾನ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಹೀಗಾಗಿ ಖಾನ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರಿಂದ ಸದ್ಯ ಉಪ ಚುನಾವಣೆ ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT