ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಗಿಲಾನಿ ನಿಧನ

ಶ್ರೀನಗರ: ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ (91) ಬುಧವಾರ ರಾತ್ರಿ ಶ್ರೀನಗರದ ತಮ್ಮ ನಿವಾಸದಲ್ಲಿ ನಿಧನರಾದರು.
ಗಿಲಾನಿ ನಿಧನವನ್ನು ಅವರ ಕುಟುಂಬದವರು ದೃಢಪಡಿಸಿದ್ದಾರೆ. 2013ರಿಂದ ಹೆಚ್ಚಾಗಿ ಗೃಹಬಂಧನದಲ್ಲಿಯೇ ಇದ್ದ ಅವರ ಆರೋಗ್ಯ ಮೂರು ವರ್ಷಗಳಿಂದ ಹದಗೆಟ್ಟಿತ್ತು.
ಹಲವು ಬಾರಿ ಅವರ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿ, ಕಣಿವೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಉಳಿದವರು ಅವರನ್ನು ಭೇಟಿ ಮಾಡುವುದಕ್ಕೆ ಅವಕಾಶ ನೀಡುತ್ತಿರಲಿಲ್ಲ.
ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಗಿಲಾನಿ ನಿಧನಕ್ಕೆ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.