ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆರಂ ಮತ್ತು ಭಾರತ್ ಬಯೋಟೆಕ್ ಲಸಿಕೆ ತುರ್ತು ಬಳಕೆಗೆ ಅನುಮೋದನೆ

Last Updated 3 ಜನವರಿ 2021, 8:23 IST
ಅಕ್ಷರ ಗಾತ್ರ

ನವದೆಹಲಿ: ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್‌ನ ಲಸಿಕೆಗಳನ್ನು ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಅನುಮೋದನೆ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್-19 ಲಸಿಕೆ ಕನಸು ನನಸಾಗಿದ್ದು, ಎರಡು ಪ್ರಮುಖ ಲಸಿಕೆಗಳ ಬಳಕೆಗೆ ಒಪ್ಪಿಗೆ ದೊರಕಿದೆ.

ಈ ಬಗ್ಗೆ ಭಾನುವಾರ ಬೆಳಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿಸಿಜಿಐನ ವಿ.ಜಿ. ಸೋಮಾನಿ, ಸುರಕ್ಷತೆಯ ಬಗ್ಗೆ ಅಲ್ಪಸ್ವಲ್ಪ ಅನುಮಾನ ಇದ್ದಿದ್ದರೆ ನಾವಿದನ್ನು ಅನುಮೋದಿಸುವುದಿಲ್ಲ. ಲಸಿಕೆಗಳು ಶೇಕಡಾ 100ರಷ್ಟು ಸುರಕ್ಷಿತವಾಗಿದೆ. ಜ್ವರ ಹಾಗೂ ಅಲರ್ಜಿಯಂತಹ ಕೆಲವು ಅಡ್ಡ ಪರಿಣಾಮಗಳು ಪ್ರತಿ ಲಸಿಕೆಯಲ್ಲೂ ಸಾಮಾನ್ಯವಾಗಿದೆ. ಜನರು ಶಕ್ತಿಹೀನರಾಗುತ್ತಾರೆ ಎಂಬುದು ಅಸಂಬದ್ಧ ಎಂದು ಹೇಳಿದರು.

ಸಮರ್ಪಕ ಪರೀಕ್ಷೆಯ ಬಳಿಕ ತಜ್ಞರ ಸಮಿತಿಯ ಶಿಫಾರಸುಗಳನ್ನು ಸ್ವೀಕರಿಸಲು ಸಿಆರ್‌ಎಸ್‌ಸಿಒ ನಿರ್ಧರಿಸಿದೆ. ಅದರ ಪ್ರಕಾರ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗೆ ಸೆರಂ ಮತ್ತು ಭಾರತ ಬಯೋಟೆಕ್ ಲಸಿಕೆಗಳಿಗೆ ಅನುಮೋದನೆ ನೀಡಲಾಗುತ್ತಿದೆ ಎಂದು ಹೇಳಿದರು.

ಅದೇ ರೀತಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕಾಗಿ ಕ್ಯಾಡಿಲಾ ಹೆಲ್ತ್‌ಕೇರ್‌ಗೆ ಅನುಮತಿ ನೀಡಲಾಗಿದೆ ಎಂದು ಡಿಸಿಜಿಐ ತಿಳಿಸಿದೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆಗಳು 'ಕೋವಿಶೀಲ್ಡ್' ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಇನ್ನೊಂದೆಡೆ 'ಕೊವ್ಯಾಕ್ಸಿನ್' ಲಸಿಕೆಯನ್ನು ಭಾರತೀಯ ವೈದ್ಯಕೀಯ ಪರಿಷತ್ (ಐಸಿಎಂಆರ್) ಸಹಯೋಗದಲ್ಲಿ ಭಾರತ್ ಬಯೋಟೆಕ್ ದೇಶೀಯವಾಗಿ ಅಭಿವೃದ್ಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT