ಶುಕ್ರವಾರ, ಜೂನ್ 18, 2021
24 °C

ನೋವಾವ್ಯಾಕ್ಸ್‌ ಲಸಿಕೆ ಟ್ರಯಲ್‌ಗೆ ಸೀರಂ ಇನ್‌ಸ್ಟಿಟ್ಯೂಟ್‌ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪುಣೆ: ಅಮೆರಿಕ ಮೂಲದ ಕಂಪನಿ ನೋವಾವ್ಯಾಕ್ಸ್‌ ಅಭಿವೃದ್ಧಿಪಡಿಸಿರುವ ಕೋವಿಡ್‌ ಲಸಿಕೆಯ ಟ್ರಯಲ್‌ಅನ್ನು ಭಾರತದಲ್ಲಿ ಆರಂಭಿಸಲು ಅನುಮಿತಿ ಕೋರಿ ಪುಣೆಯ ಸೀರಂ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯಾ ಅರ್ಜಿ ಸಲ್ಲಿಸಿದೆ.

ಸಂಸ್ಥೆಯ ಸಿಇಒ ಅದಾರ್‌ ಪೂನಾವಾಲಾ ಶನಿವಾರ ಈ ವಿಷಯ ತಿಳಿಸಿದ್ದು, ‘ಕಂಪನಿಯು ಈ ಲಸಿಕೆಯನ್ನು ಜೂನ್‌ನಲ್ಲಿ ಬಿಡುಗಡೆ ಮಾಡುವ ಉದ್ದೇಶ ಹೊಂದಿದೆ’ ಎಂದು ಹೇಳಿದರು.

‘ನೋವಾವ್ಯಾಕ್ಸ್‌ನ ಲಸಿಕೆ ಅದ್ಭುತ ಪರಿಣಾಮ ಹೊಂದಿದೆ ಎಂಬುದು ಸಾಬೀತಾಗಿದೆ. ಭಾರತದಲ್ಲಿಯೂ ಲಸಿಕೆಯ ಟ್ರಯಲ್‌ಗೆ ಅರ್ಜಿ ಸಲ್ಲಿಸಿದ್ದೇವೆ’ ಎಂದು ಪೂನಾವಾಲಾ ಟ್ವೀಟ್‌ ಮಾಡಿದ್ದಾರೆ.

ಸಂಸ್ಥೆ ತಯಾರಿಸಿರುವ ಕೋವಿಶೀಲ್ಡ್‌ ಲಸಿಕೆಯ 1.1 ಕೋಟಿ ಡೋಸ್‌ಗಳನ್ನು ಕೇಂದ್ರ ಸರ್ಕಾರ ಖರೀದಿಸಿದ್ದು, ದೇಶದಲ್ಲಿ ಈಗಾಗಲೇ ಲಸಿಕೆ ನೀಡುವ ಕಾರ್ಯಕ್ರಮ ಜಾರಿಯಲ್ಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು