ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದೋರ್‌ನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮಂದಿ ಸಾವು

Last Updated 7 ಮೇ 2022, 5:55 IST
ಅಕ್ಷರ ಗಾತ್ರ

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನ ವಿಜಯನಗರ ಪ್ರದೇಶದ ಎರಡು ಅಂತಸ್ತಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಹಲವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಟ್ಟ ಗಾಯಗಳಾಗಿದ್ದ 11 ಮಂದಿಯನ್ನು ರಕ್ಷಿಸಲಾಗಿದೆ.

ಎಲೆಕ್ಟ್ರಿಕ್ ಮೀಟರ್‌ನಲ್ಲಿನ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ, ವಸತಿ ಸಂಕೀರ್ಣದ ಪಾರ್ಕಿಂಗ್‌ನಲ್ಲಿದ್ದ ವಾಹನಗಳಿಗೂ ಆವರಿಸಿದೆ ಎಂದು ವಿಜಯನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ತಹಜೀಬ್ ಖಾಜಿ ಪಿಟಿಐಗೆ ತಿಳಿಸಿದ್ದಾರೆ.

‘ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಅದನ್ನು ತಹಬದಿಗೆ ತರಲು ನಮಗೆ 3 ಗಂಟೆ ಬೇಕಾಯಿತು’ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಸದ್ಯ, ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ತನಿಖೆ ನಡೆಯುತ್ತಿದೆ ಎಂದು ಖಾಜಿ ಹೇಳಿದ್ದಾರೆ.

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಘಟನೆ ಕುರಿತಂತೆ ತನಿಖೆಗೆ ಆದೇಶಿಸಿರುವ ಅವರು, ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT