ಬುಧವಾರ, ಆಗಸ್ಟ್ 17, 2022
29 °C
ಉತ್ತರ ಪ್ರದೇಶ

ಬಸ್‌, ಟ್ಯಾಂಕರ್‌ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 25 ಮಂದಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸಂಭಾಲ್: ಉತ್ತರ ಪ್ರದೇಶದ‌ಲ್ಲಿ ಬಸ್‌ ಮತ್ತು ಗ್ಯಾಸ್‌ ಟ್ಯಾಂಕರ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, 25 ಜನರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು.

ಧನಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಮುಂಜಾನೆ ಈ ಘಟನೆ ನಡೆದಿದ್ದು, ಮಂಜು ಕವಿದ ವಾತಾವರಣವಿದ್ದರಿಂದ ರಸ್ತೆ ಸಂಪೂರ್ಣವಾಗಿ ಕಾಣದೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು. 

ಆಗ್ರಾ–ಮುರಾದಾಬಾದ್‌ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಚಕ್ರೇಶ್‌ ಮಿಶ್ರಾ ಅವರು ಮಾಹಿತಿ ನೀಡಿದರು.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು