ಶನಿವಾರ, ಮಾರ್ಚ್ 25, 2023
23 °C
ಚಂದ್ರಬಾಬು ನಾಯ್ಡು ರೋಡ್‌ ಶೋನಲ್ಲಿ ಅವಘಡ

ಚಂದ್ರಬಾಬು ನಾಯ್ಡು ರೋಡ್‌ ಶೋ | ಕಾಲ್ತುಳಿತ: ಏಳು ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಬುಧವಾರ ಸಂಜೆ ಕಂದಕೂರ್ ಪಟ್ಟಣದಲ್ಲಿ ನಡೆಸಿದ ರೋಡ್ ಶೋನಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ.

ರ್‍ಯಾಲಿಯಲ್ಲಿ ಭಾಗವಹಿಸಲು ಬಂದಿದ್ದ ಏಳು ಟಿಡಿಪಿ ಬೆಂಬಲಿಗರು ಒಳಚರಂಡಿ ಕಾಲುವೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸೇರಿಸಲಾಗಿದೆ.

ನಂತರ ಎನ್‌ಟಿಆರ್‌ ವೃತ್ತದಲ್ಲಿ ನಡೆದ ರ್‍ಯಾಲಿಯಲ್ಲಿ ಟಿಡಿಪಿ ವತಿಯಿಂದ ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ  ಪರಿಹಾರವನ್ನು ನಾಯ್ಡು ಘೋಷಿಸಿದರು.

‘ಎನ್‌ಟಿಆರ್‌  ಟ್ರಸ್ಟ್ ಮೂಲಕ ಮೃತರ ಕುಟುಂಬದವರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದು ಸೇರಿದಂತೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲಾಗುವುದು’  ಎಂದು ನಾಯ್ಡು ಹೇಳಿದರು.

ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು