ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಏಳು ಮಂದಿ ಬಂಧನ

Last Updated 5 ಡಿಸೆಂಬರ್ 2020, 10:51 IST
ಅಕ್ಷರ ಗಾತ್ರ

ಸೀತಾಪುರ (ಪಿಟಿಐ): ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ, ಹಿಂದೂ ಯುವತಿಯನ್ನು ಮನೆಯಿಂದ ಅಪಹರಿಸಿದ ಆರೋಪದ ಮೇಲೆ ಏಳು ಮಂದಿಯನ್ನು ಮತಾಂತರ ನಿಷೇಧ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು.

ಪ್ರಮುಖ ಆರೋಪಿ ಜಬ್ರೇಲ್‌ ಪರಾರಿಯಾಗಿದ್ದಾನೆ. ನ.24 ರಂದು ಈ ಘಟನೆ ನಡೆದಿದ್ದು, ಅಂದಿನಿಂದ ಪ್ರಮುಖ ಆರೋಪಿ ಜಬ್ರೇಲ್‌ ಕೂಡ ನಾಪತ್ತೆಯಾಗಿದ್ದಾನೆ ಎಂದು ಯುವತಿಯ ತಾಯಿ ದೂರಿನಲ್ಲಿ ಹೇಳಿದ್ದಾರೆ. ನ.27 ರಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

‘ಮತಾಂತರ ನಿಷೇಧ ಕಾಯ್ದೆಯಡಿ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಏಳು ಜನರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಆದಷ್ಟು ಬೇಗ ಪತ್ತೆ ಹಚ್ಚುತ್ತೇವೆ. ಇದರಲ್ಲಿ ಪೊಲೀಸರ ಕಡೆಯಿಂದ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಎಸ್‌ಪಿ ರಾಜೀವ್‌ ದೀಕ್ಷಿತ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT