ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತ: 7 ಸಾವು, 13 ಮಂದಿಗೆ ಗಾಯ

Last Updated 1 ಅಕ್ಟೋಬರ್ 2021, 6:34 IST
ಅಕ್ಷರ ಗಾತ್ರ

ಭಿಂಡ್‌ (ಮಧ್ಯಪ್ರದೇಶ): ಮಧ್ಯಪ್ರದೇಶದ ಭಿಂಡ್‌ ಜಿಲ್ಲೆ ಗೋಹಾದ್ ಪಟ್ಟಣದ ಬಳಿ ಬಸ್‌ ಮತ್ತು ಲಾರಿ(ಡಂಪರ್ ಟ್ರಕ್‌) ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಗ್ವಾಲಿಯರ್‌ನಿಂದ ಇಟಾವಾಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ಖರ್ಪುಸೆ ತಿಳಿಸಿದ್ದಾರೆ.

ಗೋಹಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಗೋವಿಂದಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗ್ವಾಲಿಯರ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT