ರಾಜಸ್ಥಾನ: ಟ್ರೈಲರ್‌ಗೆ ವ್ಯಾನ್ ಡಿಕ್ಕಿ, ಸ್ಥಳದಲ್ಲೇ ಏಳು ಮಂದಿ ಸಾವು

ಜೈಪುರ: ರಾಜಸ್ಥಾನದ ಬಿಲ್ವಾರಾ ಜಿಲ್ಲೆಯಲ್ಲಿ ಟ್ರೈಲರ್‌ಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ತಡರಾತ್ರಿ ಕೋಟಾದಿಂದ ಬಿಲ್ವಾರಾಗೆ ತೆರಳುತ್ತಿದ್ದ ಮಾರ್ಗದಲ್ಲಿ ಕೇಸರ್ಪುರ ಬಳಿ ಅಪಘಾತ ಸಂಭವಿಸಿದೆ.
ಮೃತರನ್ನು ಉಮೇಶ್ (40), ಮುಖೇಶ್ (23), ಜಮ್ನಾ (45), ಅಮರ್ ಚಂದ್ (32), ರಾಜು (21), ರಾಧೆಶ್ಯಾಮ್ (56) ಮತ್ತು ಶಿವಲಾಲ್ (40) ಎಂದು ಗುರುತಿಸಲಾಗಿದೆ.
ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.