ಶನಿವಾರ, ಜುಲೈ 2, 2022
25 °C

ದೆಹಲಿಯ ಗೋಕಲ್‌ಪುರಿಯಲ್ಲಿ ಅಗ್ನಿ ಅವಘಡ: 7 ಮಂದಿ ಸಜೀವ ದಹನ 

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿಯ ಗೋಕಲ್‌ಪುರಿ ವಿಲೇಜ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಜೀವವಾಗಿ ದಹನವಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಈಶಾನ್ಯ ದೆಹಲಿಯ ಗೋಕಲ್‌ಪುರಿಯ ಪಿಲ್ಲರ್ ನಂ 12ರ ಸಮೀಪ ಬೆಂಕಿ ಅವಘಡ ಸಂಭವಿಸಿದ ಬಗ್ಗೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕರೆ ಬಂದಿದ್ದು, ತಕ್ಷಣವೇ 13 ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಯಿತು ಎಂದ ಅವರು ಹೇಳಿದರು.

‘ಗುಡಿಸಲುಗಳಿಂದ ಏಳು ಸುಟ್ಟ ದೇಹಗಳನ್ನು ಹೊರತೆಗೆಯಲಾಗಿದೆ’ಎಂದು ದೆಹಲಿಯ ಅಗ್ನಿಶಾಮಕ ದಳದ ಮುಖ್ಯಸ್ಥ ಅತುಲ್ ಗಾರ್ಗ್ ಐಎಎನ್ಎಸ್‌ಗೆ ತಿಳಿಸಿದ್ದಾರೆ.

60ಕ್ಕೂ ಹೆಚ್ಚು ಗುಡಿಸಲುಗಳಿಗೆ ಬೆಂಕಿ ವ್ಯಾಪಿಸಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದ್ಧಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು