ಬುಧವಾರ, ಆಗಸ್ಟ್ 17, 2022
29 °C

ಹೈದರಾಬಾದ್‌ನ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ: ಹಲವರಿಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ನಗರದ ಹೊರವಲಯದಲ್ಲಿರುವ ಬೊಲ್ಲಾರಮ್ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಶನಿವಾರ ಭಾರಿ ಸ್ಫೋಟ ಸಂಭವಿಸಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಸುಮಾರು 10 ಕಾರ್ಮಿಕರು ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕೈಗಾರಿಕಾ ಪ್ರದೇಶದಲ್ಲಿರುವ ಇನ್ನುಳಿದ ಘಟಕಗಳಲ್ಲಿನ ರಿಯಾಕ್ಟರ್‌ಗಳನ್ನು ಮುಚ್ಚಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಮಿಕರನ್ನು ಸ್ಥಳಾಂತರಿಸಲಾಗಿದೆ.

ಈ ವರೆಗೆ ಯಾವುದೇ ಸಾವು ಸಂಭವಿಸಿದ ಬಗೆಗಿನ ಮಾಹಿತಿ ಲಭ್ಯವಾಗಿಲ್ಲ. 

ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ... 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು