ಕಾಂಚಿಪುರಂ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಕುರುವಿಮಲೈ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದಾರೆ.
ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು ಇವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಖಾಸಗಿ ಪಟಾಕಿ ಗೋದಾಮಿನಲ್ಲಿ 30 ಕಾರ್ಮಿಕರು ಕೆಲಸ ಮಾಡುತ್ತಿದ್ದರು. 12 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಪೋಟಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
ಸ್ಫೋಟದ ತೀವ್ರತೆಗೆ ಗೋದಾಮಿನ ಕಟ್ಟಡ ಕುಸಿದಿದೆ. ಗೋದಾಮಿನಲ್ಲಿ ಸಿಲುಕಿದ್ದ 10 ಜನರನ್ನು ರಕ್ಷಣೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಗೋದಾಮಿನ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಘಟನೆ ಕುರಿತಂತೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.