ಗುರುವಾರ , ಜನವರಿ 28, 2021
28 °C

ದೆಹಲಿಯಲ್ಲಿ ತೀವ್ರ ಚಳಿ: ಹೊಸ ವರ್ಷದ ಮೊದಲ ದಿನ 15 ವರ್ಷಗಳಲ್ಲೇ ಕನಿಷ್ಠ ತಾಪಮಾನ

ಪಿಟಿಐ Updated:

ಅಕ್ಷರ ಗಾತ್ರ : | |

New Delhi: A man covers himself with a blanket during a cold winter morning, in New Delhi, Thursday, Dec. 31, 2020. PTI Photo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಚಳಿ ತೀವ್ರಗೊಂಡಿದ್ದು, ಹೊಸ ವರ್ಷದ ಮೊದಲ ದಿನವೇ 15 ವರ್ಷಗಳಲ್ಲೇ ಕನಿಷ್ಠ ತಾಪಮಾನ ವರದಿಯಾಗಿದೆ. ಶುಕ್ರವಾರ ತಾಪಮಾನ 1.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಭಾರಿ ಹೊಂಜು (ಫಾಗ್) ಆವರಿಸಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

2006ರ ಜನವರಿ 8ರಂದು ದೆಹಲಿಯಲ್ಲಿ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈವರೆಗಿನ ಅತಿ ಕನಿಷ್ಠ ತಾಪಮಾನ 0.6 ಡಿಗ್ರಿ ಸೆಲ್ಸಿಯಸ್ 1935ರ ಜನವರಿಯಲ್ಲಿ ದಾಖಲಾಗಿತ್ತು.

ಇದನ್ನೂ ಓದಿ: 

ಕಳೆದ ವರ್ಷ 2.4 ಡಿಗ್ರಿ ಸೆಲ್ಸಿಯಸ್ ಅತಿ ಕಡಿಮೆ ತಾಪಮಾನ ವರದಿಯಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಬೆಳಿಗ್ಗೆ 6 ಗಂಟೆ ವೇಳೆಗೆ ಸಫ್ದರ್‌ಜಂಗ್ ಮತ್ತು ಪಾಲಂನಲ್ಲಿ ದಟ್ಟ ಹೊಂಜು ಆವರಿಸಿದ್ದು, ಶೂನ್ಯದಿಂದ 50 ಮೀಟರ್ ಗೋಚರತೆ (ಝೀರೊ ವಿಸಿಬಿಲಿಟಿ) ಇತ್ತು ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ತಿಳಿಸಿದ್ದಾರೆ.

ಜನವರಿ 2ರಿಂದ 6ರ ಅವಧಿಯಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಜನವರಿ 4–5ರ ವೇಳೆಗೆ ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು ಎಂದೂ ಅವರು ಹೇಳಿದ್ದಾರೆ.

ಜನವರಿ 3–5ರ ಮಧ್ಯೆ ತುಂತುರು ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು