ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಬಿಸಿಗಾಳಿ: ಈ ವರ್ಷದ ಅತಿ ಗರಿಷ್ಠ ಉಷ್ಣಾಂಶ ದಾಖಲು

ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರದ ರಾಜಧಾನಿಯಲ್ಲಿ ಬಿಸಿಲಿನ ಝಳ ವಿಪರೀತವಾಗಿ ಏರಿಕೆ ಕಂಡಿದ್ದು, ಬುಧವಾರ 43.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ತಲುಪಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೆಹಲಿಯಲ್ಲಿ ಸೋಮವಾರದಿಂದ ಬಿಸಿ ಗಾಳಿ ಬೀಸುತ್ತಿದ್ದು, 43 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ತಾಪಮಾನ ದಾಖಲಾಗಿದೆ. ಇದು ಈ ವರ್ಷ ದಾಖಲಾದ ಅತಿ ಗರಿಷ್ಠ ಉಷ್ಣಾಂಶವಾಗಿದೆ.

ಮುಂಗಾರು ಮಳೆಯು ಆರಂಭವಾಗಲು ಕನಿಷ್ಠ ಒಂದು ವಾರ ಬಾಕಿ ಇರುವುದರಿಂದ ದೆಹಲಿಯ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಬಿಸಿಗಾಳಿಯು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಸಾಮಾನ್ಯವಾಗಿ ದೆಹಲಿಯಲ್ಲಿ ಜೂನ್‌ 20ರ ವೇಳೆಗೆ ಬಿಸಿ ಗಾಳಿ ಬೀಸುತ್ತದೆ. ಅದರ ಬಳಿಕ ತಾಪಮಾನ ಕಡಿಮೆಯಿರುತ್ತದೆ. ಆದರೆ ಈ ಬಾರಿ ಮುಂಗಾರು ಮಳೆ ತಡವಾಗಿರುವುದರಿಂದ ಬಹುಶಃ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ ಎಂದು ಐಎಂಡಿಯ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಕುಲ್‌ದೀಪ್‌ ಶ್ರೀವಾಸ್ತವ್‌ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT