ಸಾಮರ್ಥ್ಯ ವೃದ್ಧಿಗೆ ಪ್ರತಿ ಠಾಣೆಗೂ ಐದು ಗುರಿ ನಿಗದಿಸಿ: ಅಮಿತ್ ಶಾ ಸೂಚನೆ

ನವದೆಹಲಿ: 75ನೇ ಸ್ವಾತಂತ್ರ್ಯೋತ್ಸವ ನಡೆಯುವ 2022ರ ವೇಳೆಗೆ ಸಾಮರ್ಥ್ಯ ವೃದ್ಧಿಗೆ ಪೂರಕವಾಗಿ ಪ್ರತಿ ಠಾಣೆಗೆ ಐದು ಗುರಿ ನಿಗದಿಪಡಿಸಬೇಕು ಎಂದು ದೆಹಲಿ ಪೊಲೀಸ್ ಇಲಾಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ.
ದೆಹಲಿ ಪೊಲೀಸ್ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕೋವಿಡ್ ಸಂದರ್ಭದಲ್ಲಿ ಹಾಗೂ ಕಳೆದ ವರ್ಷ ದೆಹಲಿಯಲ್ಲಿ ನಡೆದ ಗಲಭೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ ಶಾಂತಿ ನೆಲೆಸಲೂ ಸಿಬ್ಬಂದಿ ಕಾರಣರಾಗಿದ್ದಾರೆ ಎಂದು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಶಾ ಅವರು, ಗಣನೀಯ ಸೇವೆಗಾಗಿ ಕೆಲ ಸಿಬ್ಬಂದಿಗೆ ಸನ್ಮಾನಿಸಿದರು ಮತ್ತು ಕೋವಿಡ್ ಸಂದರ್ಭದಲ್ಲಿ ಕರ್ತವ್ಯದ ವೇಳೆ ಮೃತಪಟ್ಟ ಸಿಬ್ಬಂದಿಗೆ ನಮನ ಸಲ್ಲಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.