ಬುಧವಾರ, ಮೇ 18, 2022
23 °C

ಬಂಗಾಳದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಗೆ ನಾಳೆ ಅಮಿತ್‌ ಶಾ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ನಾಲ್ಕನೇ ಸುತ್ತಿನ ಪರಿವರ್ತನಾ ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಚಾಲನೆ ನೀಡಲಿದ್ದಾರೆ.

ಕೂಚ್‌ ಬೆಹರ್‌ದ ಠಾಕೂರ್‌ಬರಿ ಮೈದಾನದಲ್ಲಿ ನಡೆಯಲಿರುವ ರ‍್ಯಾಲಿ ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ ಎಂದು ಪಕ್ಷದ ಪ್ರಧಾನ ವಕ್ತಾರ ಅನಿಲ್ ಬಲೂನಿ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್‌ ರ‍್ಯಾಲಿ ವೇಳೆ ನಡೆದ ಹಿಂಸಾಚಾರದಿಂದಾಗಿ ಶಾ ಅವರು ಪಶ್ಚಿಮ ಬಂಗಾಳಕ್ಕೆ ಕೈಗೊಳ್ಳಬೇಕಿದ್ದ ಪ್ರವಾಸ ಮುಂದೂಡಿದ್ದರು.

ತೃಣಮೂಲ ಕಾಂಗ್ರೆಸ್‌ ಅಧ್ಯಕ್ಷೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತವನ್ನು ಕೊನೆಗಾಣಿಸಲು ಬಿಜೆಪಿಯು ರಾಜ್ಯದ 294 ವಿಧಾನಸಭಾ ಸ್ಥಾನಗಳನ್ನು ತಲುಪುವಂತೆ ಐದು ಸುತ್ತಿನ ಪರಿವರ್ತನಾ ರ‍್ಯಾಲಿಯನ್ನು ನಡೆಸುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು