ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಮಾಡಿದ್ದ ಶಂಕರ್ ಮಿಶ್ರಾ ಏರ್ ಇಂಡಿಯಾದಿಂದ ಬ್ಯಾನ್

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಶಂಕರ್ ಮಿಶ್ರಾ ಎಂಬಾತನನ್ನು ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್ ಇಂಡಿಯಾ ಕಂಪನಿ ಆದೇಶಿಸಿದೆ.
ಈ ಕುರಿತು ಎಎನ್‌ಐ ಟ್ವೀಟ್ ಮಾಡಿದೆ. ಶಂಕರ್ ಮಿಶ್ರಾ ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ 4 ತಿಂಗಳುವರೆಗೆ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ. ಈ ಬೆಳವಣಿಗೆ ನಂತರ ಡಿಜಿಸಿಎ ಕೂಡ ಏನು ಕ್ರಮ ಕೈಗೊಳ್ಳಲಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಸುಖೇಶ್ ಚಂದ್ರಶೇಖರ್ ನನ್ನ ಜೀವನವನ್ನು ನರಕ ಮಾಡಿದ: ಜಾಕ್ವೆಲಿನ್ ಕಣ್ಣೀರು
2022ರ ನವೆಂಬರ್ 26 ರಂದು, ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ. ವಿಮಾನ ಲ್ಯಾಂಡ್ ಆದ ನಂತರವೂ ಮಿಶ್ರಾ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ. ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಈ ಘಟನೆ ನಡೆದಿತ್ತು.
ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಈತನ ವಿರುದ್ಧ ಜನವರಿ 4ರಂದು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಮಿಶ್ರಾನನ್ನು ಬಂಧಿಸಿ ದೆಹಲಿಗೆ ಕರೆತರಲಾಗಿತ್ತು.
ಜ.7 ರಂದು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಹೌಸ್ ಕೋರ್ಟ್ ನ್ಯಾಯಾಧೀಶರು, ಇದೊಂದು ಅತ್ಯಂತ ಅಸಹ್ಯಕರ ಘಟನೆ ಎಂದು ಖಂಡಿಸಿದ್ದರು.
ನಡುರಾತ್ರಿಲಿ ರಸ್ತೆಯಲ್ಲಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಮೇಲೆ ಕುಡುಕನ ಶೋಷಣೆ!
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.