ಪಣಜಿ: ‘ಕರ್ನಾಟಕ ಮತ್ತು ಗೋವಾದಲ್ಲಿ ಬಿಜೆಪಿ ಸರ್ಕಾರವಿದ್ದು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆಯ ಮೂಲಕ ಮಹದಾಯಿ ವಿವಾದವನ್ನು ಪರಿಹರಿಸಬೇಕು’ ಎಂದು ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗಿರುವ ಶಂಕರಗೌಡ ಪಾಟೀಲ ಮಂಗಳವಾರ ಹೇಳಿದ್ದಾರೆ.

ಆಯುಷ್ ಸಚಿವಾಲಯಕ್ಕೆ ಸಂಬಂಧಿಸಿದ ವಿಚಾರದ ಚರ್ಚೆಗಾಗಿ, ಆಯುಷ್ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರನ್ನು ಭೇಟಿಯಾಗಲು ಗೋವಾಕ್ಕೆ ಭೇಟಿ ನೀಡಿದ ಶಂಕರಗೌಡ ಅವರು, ‘ನದಿ ನೀರು ಹಂಚಿಕೆಯಂತಹ ಸೂಕ್ಷ್ಮ ವಿಚಾರಗಳನ್ನು ಪರಿಹರಿಸುವಲ್ಲಿ ವಿರೋಧ ಪಕ್ಷಗಳು ಸಕಾರಾತ್ಮಕ ಪಾತ್ರ ವಹಿಸಬೇಕು’ ಎಂದಿದ್ದಾರೆ.

‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬಲ್ಲರು, ಅದೇ ರೀತಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ಕೂಡ ಅನುಭವಿ. ಈ ಇಬ್ಬರೂ ಜೊತೆಯಾಗಿ ಚರ್ಚಿಸಿ ಎರಡೂ ರಾಜ್ಯಗಳ ಜನರ ಹಿತಾಸಕ್ತಿಯನ್ನು ಕಾಪಾಡಬೇಕು’ ಎಂದು ಹೇಳಿದ್ದಾರೆ.

‘ಅಗತ್ಯವಿದ್ದರೆ ಎರಡೂ ರಾಜ್ಯಗಳು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಸಲಹೆ ಪಡೆಯಬಹುದು. ವಿರೋಧ ಪಕ್ಷಗಳು ಇದರಲ್ಲಿ ರಾಜಕೀಯ ಮಾಡಬಾರದು’ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.