ಕೋಲ್ಕತ್ತ: ಕೋವಿಡ್‌ನಿಂದ ಬಳಲುತ್ತಿದ್ದ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಬಂಗಾಳಿ ಭಾಷೆಯ ಖ್ಯಾತ ಕವಿ ಶಂಖ ಘೋಷ್ (89) ಅವರು ಬುಧವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಏಪ್ರಿಲ್ 14 ರಂದು ಅವರಿಗೆ ಕೋವಿಡ್–19 ದೃಢಪಟ್ಟಿತ್ತು. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಿಗ್ಗೆ 8.30ಕ್ಕೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

ಮಂಗಳವಾರ ತಡರಾತ್ರಿ ಅವರ ಆರೋಗ್ಯ ಸ್ಥಿತಿ ಹಠಾತ್ತನೆ ಹದಗೆಟ್ಟಿತ್ತು. ನಂತರ ಅವರಿಗೆ ಆಮ್ಲಜನಕದ ಬೆಂಬಲವನ್ನು ನೀಡಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಕೆಲವು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಆದಿಮ್ ಲತಾ - ಗುಲ್ಮೋಮೇ’ ಮತ್ತು ‘ಮುರ್ಖಾ ಬರೋ ಸಮಾಜಿಕ್ ನಾಯ್’ ಕೃತಿಗಳು ಘೋಷ್ ಅವರಿಗೆ ಖ್ಯಾತಿ ತಂದುಕೊಟ್ಟಿದ್ದವು. 2011ರಲ್ಲಿ ಪದ್ಮಭೂಷಣ ಹಾಗೂ 2016ರಲ್ಲಿ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.