ಶರದ್ ಪವಾರ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ
ಮುಂಬೈ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಸೋಮವಾರ ಬಿಡುಗಡೆ ಮಾಡಲಾಗಿದೆ.
ಕಳೆದ ವಾರ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒತ್ತಡ ಮತ್ತು ಬಳಲಿಕೆಯಿಂದ ಅವರ ಅಸ್ವಸ್ಥಗೊಂಡಿದ್ದರು ಎಂದು ವೈದ್ಯರು ಮಾಹಿತಿ ಹೇಳಿದ್ದರು.
ಶರದ್ ಪವಾರ್ ಸಂಪೂರ್ಣವಾಗಿ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.