ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತಾ ಶಾ ಭೇಟಿ ಮಾಡಿದ ಪವಾರ್: ಸಕ್ಕರೆ-ಪೆಟ್ರೋಲ್‌ ಬೆಲೆ ಹೆಚ್ಚಳದ ಬಗ್ಗೆ ಚರ್ಚೆ

Last Updated 3 ಆಗಸ್ಟ್ 2021, 15:05 IST
ಅಕ್ಷರ ಗಾತ್ರ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ ದೆಹಲಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಕ್ಕರೆಯ ಬೆಲೆ ಹೆಚ್ಚಳ ಮತ್ತು ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಎಥೆನಾಲ್‌ ಅನ್ನು ಬೆರೆಸುವಿಕೆ ಕುರಿತು ಚರ್ಚೆ ನಡೆಸಿದರು.

ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ ಅವರು, ‘ಪ್ರಸ್ತುತ ಸಕ್ಕರೆಯ ಮಾರುಕಟ್ಟೆಯ ಬೆಲೆಯು ಅದರ ಉತ್ಪಾದನಾ ವೆಚ್ಚಗಿಂತಲೂ ಕಡಿಮೆ ಇದೆ. ಈ ಬಗ್ಗೆ ಸರ್ಕಾರ ಗಮನ ಹರಿಸುವಂತೆ ಶಾ ಅವರನ್ನು ಕೋರಲಾಯಿತು. ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಹೆಚ್ಚಿಸುವ ಕುರಿತೂ ಚರ್ಚಿಸಲಾಯಿತು’ ಎಂದು ತಿಳಿಸಿದರು.

‘ಸಕ್ಕರೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಶಾ ಅವರು ಭರವಸೆ ನೀಡಿದ್ದಾರೆ’ ಎಂದೂ ಪವಾರ್ ಮಾಹಿತಿ ನೀಡಿದರು.

ಭೇಟಿಯ ವೇಳೆ ಪವಾರ್ ಅವರೊಂದಿಗೆ ರಾಷ್ಟ್ರೀಯ–ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಅಧ್ಯಕ್ಷ ಜಯಪ್ರಕಾಶ್ ದಂಡೇಗಾಂವ್ಕರ್ ಮತ್ತು ಎನ್‌ಸಿಪಿಯ ರಾಯಗಡದ ಸಂಸದ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT