ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಶರದ್ ಪವಾರ್-ಉದ್ಧವ್ ಠಾಕ್ರೆ ಭೇಟಿ ಹಿಂದಿನ ರಹಸ್ಯವೇನು?

Last Updated 9 ಸೆಪ್ಟೆಂಬರ್ 2021, 9:20 IST
ಅಕ್ಷರ ಗಾತ್ರ

ಮುಂಬೈ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂಬುದು ವರದಿಯಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿಗಳ ಅಧಿಕೃತ 'ವರ್ಷಾ' ನಿವಾಸದಲ್ಲಿ ಮಧ್ಯಾಹ್ನದ ವೇಳೆಗೆ ಪವಾರ್ ಆಗಮಿಸಿದರು. ಬಳಿಕ ಮಹತ್ವದ ಮಾತುಕತೆ ನಡೆಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಶಿವಸೇನೆ ಹಾಗೂ ಕಾಂಗ್ರೆಸ್ ಜೊತೆ ಎನ್‌ಸಿಪಿ ಮಿತ್ರ ಪಕ್ಷವಾಗಿದೆ.

ಇತ್ತೀಚಿನ ಇ.ಡಿ ದಾಳಿ, ಸರ್ಕಾರ ಹಾಗೂ ಆಡಳಿತ ಪಕ್ಷಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳ ನಡುವೆ ಉಭಯ ಪಕ್ಷದ ನಾಯಕರ ನಡುವಣ ಭೇಟಿ ನಡೆದಿದೆ. ಭ್ರಷ್ಟಾಚಾರ, ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧ ಇ.ಡಿ ದೂರು ದಾಖಲಿಸಿತ್ತು. ಈ ಕುರಿತಾಗಿಯೂ ಚರ್ಚೆ ನಡೆಸಿದ್ದಾರೆ ಎಂಬುದು ವರದಿಯಾಗಿದೆ.

ಇದರ ಜೊತೆಗೆ ಮಹಾರಾಷ್ಟ್ರ ವಿಧಾನ ಪರಿಷತ್ತಿಗೆ 12 ಹೆಸರುಗಳನ್ನು ನಾಮ ನಿರ್ದೇಶನ ಮಾಡುವ ವಿಷಯದ ಕುರಿತಾಗಿಯೂ ಚರ್ಚೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT