ಗುರುವಾರ , ಡಿಸೆಂಬರ್ 3, 2020
20 °C

ಗೋವಾ ಕಾಂಗ್ರೆಸ್ ಮುಖಂಡರ ಜೊತೆಗೆ ಶರದ್ ಪವಾರ್ ಚರ್ಚೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ರಾಜ್ಯ ಭೇಟಿ ಸಂದರ್ಭದಲ್ಲಿ ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ವಿರೋಧಪಕ್ಷದ ನಾಯಕ ದಿಗಂಬರ್ ಕಾಮತ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಸಭೆಯ ಬಳಿಕ ಮಾತನಾಡಿದ ಚೋಡಂಕರ್ ಅವರು, 2022 ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎನ್‌ಸಿಪಿ ಜೊತೆಗೆ ಮೈತ್ರಿ  ಆಗಬಹುದು ಎಂಬ ಸಾಧ್ಯತೆಗಳನ್ನು ತಳ್ಳಿಹಾಕಿದರು.

ಇದೊಂದು, ಸೌಹಾರ್ದಯುತ ಭೇಟಿಯಾಗಿತ್ತು. ಭೇಟಿ ಸಂದರ್ಭದಲ್ಲಿ ರಾಜಕಾರಣ ಚರ್ಚೆಯಾಗಲಿಲ್ಲ ಎಂದು ಅವರು ತಿಳಿಸಿದರು. ಶರದ್ ಪವಾರ್ ಅವರ ಜೊತೆಗೆ, ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಅವರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು