ಅನಿಲ್ ದೇಶಮುಖ್ ವಿರುದ್ಧ ಪರಮ್ ಬೀರ್ ಸಿಂಗ್ ಆರೋಪಗಳು ಗಂಭೀರ: ಶರದ್ ಪವಾರ್

ಮುಂಬೈ: ‘ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಮುಂಬೈ ನಗರದ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಮಾಡಿರುವ ಆರೋಪಗಳು ಗಂಭೀರವಾಗಿವೆ’ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
‘ಈ ಆರೋಪಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸುವುದು ಅಗತ್ಯವಾಗಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.
‘ದೇಶಮುಖ ವಿರುದ್ಧ ಕ್ರಮ ಮತ್ತು ಸ್ವತಂತ್ರ ತನಿಖೆ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ದೆಹಲಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ಪರಮ್ ಬೀರ್ ಸಿಂಗ್ ಅವರು ಮಾಡಿರುವ ಆರೋಪಗಳ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿದ್ದೇನೆ. ಈ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ಮಾಜಿ ಐಪಿಎಸ್ ಅಧಿಕಾರಿ ಜ್ಯುಲಿಯೊ ರಿಬೈರೊ ಅವರ ನೆರವು ಪಡೆಯುವಂತೆ ಸಲಹೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.
‘ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಕಳೆದ ವರ್ಷ ಮರು ನೇಮಕಾತಿ ಮಾಡಿಕೊಳ್ಳಲು ಮುಖ್ಯಮಂತ್ರಿಯಾಗಲಿ ಅಥವಾ ಗೃಹ ಸಚಿವರಾಗಲಿ ಜವಾಬ್ದಾರರಲ್ಲ’ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಇವನ್ನೂ ಓದಿ...
ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಆದೇಶವಿತ್ತು: ಪರಮ್ ಬೀರ್ ಸಿಂಗ್
ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ವರ್ಗಾವಣೆ
ಅಂಬಾನಿ ಮನೆ ಬಳಿ ಸ್ಫೋಟಕ: ಎನ್ಐಎನಿಂದ ಸಚಿನ್ ವಾಜೆ ಕಾರಿನ ಹಳೆಯ ಮಾಲೀಕನ ತನಿಖೆ?
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.