ಸೋಮವಾರ, ಸೆಪ್ಟೆಂಬರ್ 26, 2022
22 °C

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ತರೂರ್– ಗೆಹಲೋತ್‌ ಸ್ಪರ್ಧೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಶಶಿ ತರೂರ್‌ ಅವರ ಸ್ಪರ್ಧೆಗೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಹಸಿರು ನಿಶಾನೆ ತೋರಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ  ಅಶೋಕ್‌ ಗೆಹಲೋತ್‌ ಅವರು ಸಹ ಆಕಾಂಕ್ಷಿಯಾಗಿದ್ದು, ಚುನಾವಣಾ ಕಣ ರಂಗೇರುವ ನಿರೀಕ್ಷೆ ಇದೆ.

ರಾಹುಲ್‌ ಗಾಂಧಿ ಅವರನ್ನೇ ಮತ್ತೊಮ್ಮೆ ಅಧ್ಯಕ್ಷರನ್ನಾಗಿ ಆಯ್ಕೆಮಾಡ
ಬೇಕೆಂದು ಪಕ್ಷದ ಕೆಲವು ಪ್ರಮುಖ ನಾಯಕರು ಒತ್ತಡ ಹೇರಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ.

ಶಶಿ ತರೂರ್‌ ಸೋಮವಾರ ಸೋನಿಯಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿಗ, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅನುಮತಿ ನೀಡಿದರು. ಗಾಂಧಿ ಕುಟುಂಬದ ಬೆಂಬಲಿತ ಅಭ್ಯರ್ಥಿ ತಮ್ಮ ಎದುರು ಕಣಕ್ಕಿಳಿದರೂ ತರೂರ್‌ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಮೂಲಗಳು ಖಚಿತಪಡಿಸಿವೆ. ‘ರಾಹುಲ್‌ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರೆ ಸ್ಪರ್ಧೆಯಿಂದ ಹಿಂದೆ ಸರಿಯುವೆ’ ಎಂದು ತರೂರ್‌ ಹೇಳಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು