ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸೋನಿಯಾ ಸಮ್ಮತಿ ಪಡೆದ ಶಶಿ ತರೂರ್ 

Last Updated 19 ಸೆಪ್ಟೆಂಬರ್ 2022, 15:25 IST
ಅಕ್ಷರ ಗಾತ್ರ

ನವದೆಹಲಿ:ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ಮುಂದಿನ ತಿಂಗಳು ನಡೆಯಲಿರುವ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿಯವರಿಂದ ಸಂಸದ ಶಶಿ ತರೂರ್‌ ಅನುಮತಿ ಪಡೆದಿದ್ದಾರೆ.

‘ಶಶಿ ತರೂರ್‌ ಬಯಸುವುದಾದರೆ ಅಧ್ಯಕ್ಷ ಸ್ಥಾನಕ್ಕೆ ಅವರು ಸ್ಪರ್ಧಿಸಬಹುದು. ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಲು ಅವಕಾಶವಿದೆ’ ಎಂದು ಸೋನಿಯಾ ಗಾಂಧಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದಕ್ಕೂ ಹಿಂದೆ, ಸೋಮವಾರ ಮಧ್ಯಾಹ್ನ ತರೂರ್‌ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು.

ಪಕ್ಷದ ಸಾಂಸ್ಥಿಕ ಬದಲಾವಣೆ ಬಗ್ಗೆ ಸೊಲ್ಲೆತ್ತಿದ್ದ ಜಿ23 ನಾಯಕರಲ್ಲಿ ತರೂರ್‌ ಅವರೂ ಒಬ್ಬರು.

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನವನ್ನು ರಾಹುಲ್‌ ಗಾಂಧಿ ಅವರೇ ವಹಿಸಿಕೊಳ್ಳಬೇಕು ಎಂದು ರಾಜಸ್ಥಾನ, ಗುಜರಾತ್‌ ಸೇರಿದಂತೆ ಹಲವು ರಾಜ್ಯಗಳು ನಿರ್ಣಯ ಅಂಗೀಕರಿಸಿರುವ ನಡುವೇಯೇ, ಶಶಿ ತರೂರ್‌ ಸ್ಪರ್ಧೆಗೆ ಮುಂದಾಗಿರುವುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಅಧಿಸೂಚನೆ ಇದೇ 22ರಂದು ಹೊರಡಿಸಲಾಗುತ್ತಿದೆ. ‌ಚುನಾವಣೆಗೆ ಇದೇ 25ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅಕ್ಟೋಬರ್‌ 17ರಂದು ಚುನಾವಣೆ ನಡೆದು, 19ರಂದು ಫಲಿತಾಂಶ ಹೊರಬೀಳಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT