ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಸ್ವಾತಂತ್ರ್ಯ ಸೂಚ್ಯಂಕ: 111ನೇ ಸ್ಥಾನಕ್ಕೆ ಕುಸಿದ ಭಾರತ, ಶಶಿ ತರೂರ್‌ ಟೀಕೆ

ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಆಡಳಿತದ ಅವಧಿಯಲ್ಲಿ ಮಾನವ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 94ನೇ ಸ್ಥಾನದಿಂದ 111ನೇ ಸ್ಥಾನಕ್ಕೆ ಕುಸಿದಿದೆ. ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರವಿದ್ದಾಗ ಭಾರತ 75ನೇ ಸ್ಥಾನದಲ್ಲಿತ್ತು ಎಂದು ತಿರುವನಂತಪುರಂನ ಸಂಸದ ಶಶಿ ತರೂರ್‌ ಹೇಳಿದ್ದಾರೆ.

ಜಾಗತಿಕ ಆರ್ಥಿಕ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತ 79ನೇ ಸ್ಥಾನದಿಂದ 105ನೇ ಸ್ಥಾನಕ್ಕೆ ಕುಸಿದಿದೆ. ವಿಶ್ವಸಂಸ್ಥೆಯ ಮಾನವ ಅಭಿವೃದ್ಧಿ ಕಾರ್ಯಕ್ರಮದ(ಯುಎನ್‌ಡಿಪಿ) ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಭಾರತ 129ನೇ ಸ್ಥಾನದಿಂದ 131ನೇ ಸ್ಥಾನಕ್ಕೆ ಕುಸಿದಿದೆ ಎಂದು ಶಶಿ ತರೂರ್‌ ತಮ್ಮ ಟ್ವೀಟ್‌ನಲ್ಲಿ ದಾಖಲಿಸಿದ್ದಾರೆ.

ಬಿಜೆಪಿ ಗೆಲ್ಲುತ್ತಿರುವುದು ಸರ್ಕಾರದ ಸಾಧನೆಯಿಂದಲ್ಲ ಎಂದು ಶಶಿ ತರೂರ್‌ ಕೇಂದ್ರಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. ಈ ಮೂಲಕ ಮಾನವ ಸ್ವಾತಂತ್ರ್ಯ ಸೂಚ್ಯಂಕ, ಜಾಗತಿಕ ಆರ್ಥಿಕ ಸ್ವಾತಂತ್ರ್ಯ ಸೂಚ್ಯಂಕ, ಯುಎನ್‌ಡಿಪಿಯ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿನ ಕಳಪೆ ಪ್ರದರ್ಶನದ ಹೊಣೆಯನ್ನು ಏಕೆ ಕೇಂದ್ರ ಸರ್ಕಾರ ಹೊರುತ್ತಿಲ್ಲ ಎಂಬುದನ್ನು ಪರೋಕ್ಷವಾಗಿ ಶಶಿ ತರೂರ್ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT