ಮಂಗಳವಾರ, ಅಕ್ಟೋಬರ್ 20, 2020
22 °C

ಐಶಾರಾಮಿ ಬಂಗಲೆ ವಶಕ್ಕೆ ಕ್ರಮ: ಜಯಲಲಿತಾ ಆಪ್ತೆ ಶಶಿಕಲಾ ಹಾಗೂ ಇತರರಿಗೆ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತೆ, ವಿ.ಕೆ. ಶಶಿಕಲಾ ಅವರ ಕುಟುಂಬಕ್ಕೆ ಸೇರಿದ ಎರಡು ಐಶಾರಾಮಿ ಬಂಗಲೆಗಳನ್ನು ವಶಪಡಿಸಿಕೊಳ್ಳುವ ಪ‍್ರಕ್ರಿಯೆಯನ್ನು ಆದಾಯ ತೆರಿಗೆ ಇಲಾಖೆಯ ಬೇನಾಮಿ ಆಸ್ತಿ ತಡೆ ಘಟಕವು ಆರಂಭಿಸಿದೆ.

ನೀಲಗಿರಿಯ ಪ್ರದೇಶ, ನಗರದ ಹೊರವಲಯದಲ್ಲಿರುವ ಸುಮಾರು ₹2,000 ಕೋಟಿ ಮೌಲ್ಯದ ಈ ಬಂಗಲೆಗಳನ್ನು ವಶಪಡಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯು ಶಶಿಕಲಾ ಹಾಗೂ ಅವರ ಸಂಬಂಧಿಗಳಾದ ಇಳವರಸಿ, ಜಯಲಲಿತಾ ಅವರ ದತ್ತುಪುತ್ರ ವಿ.ಎನ್‌. ಸುಧಾಕರನ್‌ ಅವರಿಗೆ ನೋಟಿಸ್‌ ನೀಡಿದೆ. ‘1988ರ ಬೇನಾಮಿ ಆಸ್ತಿ ವಹಿವಾಟು ಕಾಯ್ದೆಯ ಸೆಕ್ಷನ್‌ 24(3)ರ ಅಡಿಯಲ್ಲಿ ಈ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ’ ಎಂದು ಆದಾಯ ತೆರಿಗೆ ಇಲಾಖೆಯ ಉಪ ಆಯುಕ್ತ ಯು.ಎನ್‌. ದಿಲೀಪ್‌ ಹೇಳಿದ್ದಾರೆ. ಜಯಲಲಿತಾ ಅವರ ಉತ್ತರಾಧಿಕಾರಿಗಳೆಂದು ಮೆಡ್ರಾಸ್‌ ಹೈಕೋರ್ಟ್‌ ಘೋಷಿಸಿರುವ ಜೆ. ದೀಪಾ ಹಾಗೂ ಜೆ. ದೀಪಕ್‌ ಅವರಿಗೂ ನೋಟಿಸ್‌ ಜಾರಿ ಮಾಡಿರುವುದು ವಿಶೇಷವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು