ಗುರುವಾರ , ನವೆಂಬರ್ 26, 2020
20 °C

₹700 ಕೋಟಿ ಅವ್ಯವಹಾರ: ಶೆಹಬಾಜ್‌ ಷರೀಫ್‌ಗೆ ಜೈಲು ಶಿಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾಹೋರ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ಮತ್ತು ಸಂಸತ್ತಿನ ವಿರೋಧಪಕ್ಷದ ನಾಯಕ ಶಹಬಾಜ್ ಷರೀಫ್ ಅವರಿಗೆ ಇಲ್ಲಿನ ನ್ಯಾಯಾಲಯ ಮಂಗಳವಾರ ಜೈಲು ಶಿಕ್ಷೆ ವಿಧಿಸಿದೆ.

₹ 700 ಕೋಟಿ ಅವ್ಯವಹಾರದ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರ ಶಹಬಾಜ್‌ಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು. ಇದಾದ ನಂತರ ಸೆ.28 ರಂದು ನ್ಯಾಷನಲ್‌ ಅಕೌಂಟೆಬಿಲಿಟಿ ಬ್ಯೂರೊ (ಎನ್‌ಎಬಿ) ಅವರನ್ನು ಬಂಧಿಸಿತ್ತು. ಮಾರನೆಯ ದಿನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಮಂಗಳವಾರ, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಎನ್‌ಎಪಿ ಮನವಿ ಮಾಡಿತ್ತು. ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ಶಹಬಾಜ್ ಅವರಿಗೆ ಜೈಲು ಶಿಕ್ಷೆ ವಿಧಿಸಿತು.

ಮೂರು ವಾರಗಳ ಕಾಲ ಬಂಧನದಲ್ಲಿದ್ದಾಗ, ನನ್ನನ್ನು ಎನ್‌ಎಬಿ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆ ಕೇಳಲಿಲ್ಲ ಎಂದು ಶಹಬಾಜ್‌ ನ್ಯಾಯಾಲಯಕ್ಕೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು