ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಶಿಕ್ಷಕ ಪರ್ವ: ಶಿಕ್ಷಣ ಕ್ಷೇತ್ರದ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಾಲನೆ ನೀಡಿದರು.

ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ‘ಶಿಕ್ಷಕ ಪರ್ವ’ವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಈ ಕಾರ್ಯಕ್ರಮಗಳು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವುದಲ್ಲದೇ ಯುವಕರ ಭವಿಷ್ಯವನ್ನು ರೂಪಿಸಲಿದೆ. ಇದು ದೇಶವನ್ನು ರೂಪಿಸುವಲ್ಲಿಯೂ ಪ್ರಮಖ ಪಾತ್ರವಹಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತೀಯ ಸಂಜ್ಞೆ ಭಾಷೆ ನಿಘಂಟು(ಯುನಿವರ್ಸಲ್ ಡಿಸೈನ್ ಆಫ್ ಲರ್ನಿಂಗ್‌ಗೆ ಅನುಗುಣವಾಗಿ ಶ್ರವಣ ದೋಷವುಳ್ಳವರಿಗಾಗಿ ರೂಪಿಸಲಾದ ಆಡಿಯೊ–ಪಠ್ಯ ಎಂಬೆಡೆಡ್‌ ಸಂಜ್ಞೆ ಭಾಷೆ ವಿಡಿಯೊ), ಟಾಕಿಂಗ್‌ ಬುಕ್‌ (ದೃಷ್ಟಿದೋಷವುಳ್ಳವರಿಗಾಗಿ ಆಡಿಯೊ ಪುಸ್ತಕ), ನಿಪುಣ್‌ ಭಾರತ್‌ ಮತ್ತು ವಿದ್ಯಾಂಜಲಿ ಪೋರ್ಟಲ್‌ಗೆ ಪ್ರಧಾನಿ ಅವರು ಚಾಲನೆ ನೀಡಿದರು.

ಈ ವೇಳೆ ಟೋಕಿಯೊ ಒಲಿಂಪಿಕ್ಸ್‌ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಪ್ರಧಾನಿ ಅವರು, ‘ಭಾರತದ ಯುವ ಪೀಳಿಗೆಗೆ ಅವರು ಸ್ಪೂರ್ತಿ ನೀಡಿದ್ದಾರೆ’ ಎಂದರು.

‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಕನಿಷ್ಠ 75 ಶಾಲೆಗಳಿಗೆ ಭೇಟಿ ನೀಡುವಂತೆ ಕ್ರೀಡಾಪಟುಗಳಲ್ಲಿ ನಾನು ಮನವಿ ಮಾಡಿದ್ದೆ. ಇದಕ್ಕೆ ಅವರು ಸಮ್ಮತಿಸಿದ್ದಾರೆ ’ಎಂದು ತಿಳಿಸಿದರು.

‘ಕಳೆದ ಏಳು ವರ್ಷಗಳಲ್ಲಿ ಸರ್ಕಾರದ ನಿರ್ಧಾರಗಳಲ್ಲಿ ಜನರು ಪ್ರಮುಖ ಪಾತ್ರವಹಿಸಿದ್ದಾರೆ. ಜನರ ಸಹಭಾಗಿತ್ವ ಇಲ್ಲದೇ ಸ್ವಚ್ಛ ಭಾರತದಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿರಲಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು