ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಡನ್‌ ಮೂಲದ ಸಂಸ್ಥೆಯೊಂದಿಗೆ ಕೈಜೋಡಿಸಿದ್ದ ರಾಜ್‌ ಕುಂದ್ರಾ: ಮುಂಬೈ ಪೊಲೀಸರು

ಅಶ್ಲೀಲ ಚಿತ್ರಗಳ ತಯಾರಿಕೆ
ಅಕ್ಷರ ಗಾತ್ರ

ಮುಂಬೈ: ಲಂಡನ್ ಮೂಲದ ಸಂಸ್ಥೆಯೊಂದಿಗೆ ಕೈಜೋಡಿಸುವ ಮೂಲಕ ರಾಜ್‌ ಕುಂದ್ರಾ ಮಾಲೀಕತ್ವದ ಕಂಪನಿಯು ಅಶ್ಲೀಲ ಚಿತ್ರಗಳ ತಯಾರಿಕೆಯಲ್ಲಿ ತೊಡಗಿತ್ತು ಎಂದು ಮುಂಬೈ ಪೊಲೀಸರು ಎನ್‌ಡಿಟಿವಿಗೆ ಮಾಹಿತಿ ನೀಡಿದ್ದಾರೆ.

ರಾಜ್ ಕುಂದ್ರಾ ಅವರ ವಿಯಾನ್ ಇಂಡಸ್ಟ್ರೀಸ್ ಲಂಡನ್ ಮೂಲದ ಕೆನ್ರಿನ್ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿತ್ತು. ಕೆನ್ರಿನ್‌ ಸಂಸ್ಥೆಯು 'ಹಾಟ್‌ ಶಾಟ್ಸ್' ಎಂಬ ಆ್ಯಪ್‌ ಹೊಂದಿದ್ದು, ಅಶ್ಲೀಲ ಚಿತ್ರಗಳನ್ನು ತಯಾರಿಸಿ, ಬಿಡುಗಡೆ ಮಾಡುತ್ತಿತ್ತು ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆನ್ರಿನ್‌ ಸಂಸ್ಥೆಯ ಜೊತೆ ಒಪ್ಪಂದ ಹೊಂದಿದ್ದ ರಾಜ್‌ ಕುಂದ್ರಾ ಅವರ ಕಂಪನಿಯು ಭಾರತೀಯ ವೀಕ್ಷಕರಿಗಾಗಿಯೇ ಅಶ್ಲೀಲ ಚಿತ್ರಗಳನ್ನು ತಯಾರಿಸುವಲ್ಲಿ ಕಾರ್ಯನಿರತವಾಗಿತ್ತು ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಕೆನ್ರಿನ್‌ ಸಂಸ್ಥೆಯು ರಾಜ್ ಕುಂದ್ರಾ ಅವರ ಸೋದರ ಮಾವನ ಒಡೆತನದಲ್ಲಿದೆ ಎಂಬ ಸ್ಫೋಟಕ ಮಾಹಿತಿಯನ್ನೂ ಮುಂಬೈ ಪೊಲೀಸರು ನೀಡಿದ್ದಾರೆ.

ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಆ್ಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪದ ಮೇಲೆ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಸ್ಥಳೀಯ ನ್ಯಾಯಾಲಯ ಜುಲೈ 23ರವರೆಗೆ ಪೊಲೀಸ್‌ ವಶಕ್ಕೆ ಒಪ್ಪಿಸಿದೆ.

ರಾಜ್‌ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದರು. ಪೊಲೀಸರು ಮತ್ತೊಬ್ಬ ಆರೋಪಿ ರಿಯಾನ್‌ ಜಾನ್‌ನನ್ನು ಬಂಧಿಸಿದ್ದು ಆತನನ್ನು ಜುಲೈ 23ರವರೆಗೂ ನ್ಯಾಯಾಲಯ ಪೊಲೀಸ್‌ ವಶಕ್ಕೆ ಒಪ್ಪಿಸಿದೆ. ಕುಂದ್ರಾ ಹಾಗೂ ರಿಯಾನ್‌ನನ್ನು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT