ಅರ್ನಬ್ ವಿರುದ್ಧದ FIR ರದ್ದು: ‘ಸುಪ್ರೀಂ’ನಿಂದ ಅರ್ಜಿ ಹಿಂಪಡೆದ ಶಿಂದೆ ಸರ್ಕಾರ

ನವದೆಹಲಿ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ವಿರುದ್ಧದ ತನಿಖೆ ರದ್ದುಗೊಳಿಸಿದ್ದ ಬಾಂಬೆ ಹೈಕೋರ್ಟ್‌ನ ಮಧ್ಯಂತರ ತೀರ್ಪು ಪ್ರಶ್ನಿಸಿ ಹಿಂದಿನ ಉದ್ಧವ್ ಠಾಕ್ರೆ ನೇತೃತ್ವದ ಮಹಾವಿಕಾಸ ಅಘಾಡಿ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಏಕನಾಥ ಶಿಂದೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಹಿಂಪಡೆದಿದೆ.
‘ಸರ್ಕಾರದ ಸೂಚನೆ ಮೇರೆಗೆ ಅರ್ಜಿ ಹಿಂಪಡೆಯುತ್ತಿದ್ದೇನೆ’ ಎಂದು ಮಹಾರಾಷ್ಟ್ರ ಸರ್ಕಾರದ ಪರ ವಕೀಲ ನ್ಯಾಯಾಲಯಕ್ಕೆ ತಿಳಿಸಿದರು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ಇದಕ್ಕೆ ಸಮ್ಮತಿಸಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.