ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಸೇನಾ ಮತ್ತು ಬಿಜೆಪಿ ಶತ್ರುಗಳಲ್ಲ: ಹೊಸ ಚರ್ಚೆ ಹುಟ್ಟುಹಾಕಿದ ಫಡಣವಿಸ್ ಹೇಳಿಕೆ

ಅಕ್ಷರ ಗಾತ್ರ

ಮುಂಬೈ: ಶಿವಸೇನಾ ಮತ್ತು ಬಿಜೆಪಿ ಪಕ್ಷಗಳು ಶತ್ರುಗಳಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಹೇಳಿಕೆ ನೀಡಿದ್ದಾರೆ. ಇದು ಮಹಾರಾಷ್ಟ್ರದ ರಾಜಕಾರಣದಲ್ಲಿ ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದೆ.

ಭಾನುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಅವರು, 'ಕೆಲ ವಿಚಾರಗಳ ಬಗ್ಗೆ ಎರಡು ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿವೆ. ಆದರೆ, ಶಿವಸೇನಾ ಮತ್ತು ಬಿಜೆಪಿ ಪಕ್ಷಗಳು ಶತ್ರುಗಳಲ್ಲ' ಎಂದು ತಿಳಿಸಿದ್ದಾರೆ.

ಎರಡು ಪಕ್ಷಗಳು ಮತ್ತೆ ಒಂದಾಗುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಫಡಣವಿಸ್, 'ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ' ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

'ನಮ್ಮ ಸ್ನೇಹಿತರು (ಶಿವಸೇನಾ) ನಮ್ಮೊಂದಿಗೆ ಸೇರಿ 2019ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಚುನಾವಣೆಯ ನಂತರ, ನಾವು ವಿರೋಧಿಸಿದ್ದ ಜನರೊಂದಿಗೆ (ಎನ್‌ಸಿಪಿ, ಕಾಂಗ್ರೆಸ್‌) ಅವರು(ಶಿವಸೇನಾ) ಕೈಜೋಡಿಸಿದರು' ಎಂದು ಫಡಣವಿಸ್ ಹೇಳಿಕೆ ನೀಡಿದ್ದಾರೆ.

ಆಡಳಿತಾರೂಢ ಶಿವಸೇನಾ ಮುಖ್ಯ ವಕ್ತಾರ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಪ್ತ ಸಂಜಯ್‌ ರಾವುತ್‌ ಅವರು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಫಡಣವಿಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಆದರೆ, ಆ ಭೇಟಿಯ ಹಿಂದೆ ರಾಜಕಾರಣವಿರಲಿಲ್ಲ ಎಂದು ಬಿಜೆಪಿ ಹೇಳಿಕೊಂಡಿತ್ತು.

ಸಂಜಯ್‌ ರಾವುತ್‌ ಅವರು, ಪಕ್ಷದ ಮುಖವಾಣಿ ‘ಸಾಮ್ನ’ದ ಸಂಪಾದಕರೂ ಆಗಿದ್ದು, ದೇವೇಂದ್ರದ ಫಡಣವಿಸ್ ಅವರೊಂದಿಗೆ ನಿಗದಿಯಾಗಿರುವ ಸಂದರ್ಶನದ ಕುರಿತು ಚರ್ಚಿಸಲು ಭೇಟಿ ನಡೆದಿದೆ ಎಂದು ಸ್ಪಷ್ಟನೆ ನೀಡಲಾಗಿತ್ತು. .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT