ಭಾನುವಾರ, ಜನವರಿ 17, 2021
22 °C

ಕೇಂದ್ರ ಸರ್ಕಾರವು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸಲಿ: ಶಿವಸೇನಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಶಬ್ಧ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ತಡೆಯಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಶಿವಸೇನಾ ಆಗ್ರಹಿಸಿದೆ.

ಕೇಂದ್ರ ಸರ್ಕಾರವು ಶಬ್ಧ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಿ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು ಎಂದು ಶಿವಸೇನಾದ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಲಾಗಿದೆ.

ಶಿವಸೇನಾದ ದಕ್ಷಿಣ ಮುಂಬೈ ವಿಭಾಗದ ಮುಖ್ಯಸ್ಥ ಪಾಂಡುರಂಗ ಸಕ್ಪಾಲ್ ಅವರು ಮುಸ್ಲಿಂ ಮಕ್ಕಳಿಗಾಗಿ ‘ಅಜಾನ್‌’ ವಾಚನ ಸ್ಪರ್ಧೆಯನ್ನು ಏರ್ಪಡಿಸುವಂತೆ ಸಲಹೆ ನೀಡಿದ್ದರು. ಇದಕ್ಕೆ ಬಿಜೆಪಿಯಿಂದ ಭಾರೀ ಟೀಕೆ ವ್ಯಕ್ತವಾಗಿತ್ತು.

ಶಿವಸೇನಾ ನಾಯಕ ‘ಅಜಾನ್‌’ ಬಗ್ಗೆ ಹೊಗಳಿದ್ದು ಮತ್ತು ದೆಹಲಿಯ ಗಡಿಯಲ್ಲಿ ಪ್ರತಿಭಟಿಸಿದ ರೈತರನ್ನು ‘ಪಾಕಿಸ್ತಾನದ ಉಗ್ರರಿಗೆ’ ಹೋಲಿಸಿದ ಬಿಜೆಪಿ ನಡೆ ಎರಡೂ ಒಂದೇ ರೀತಿಯದ್ದು ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು