ಸೋಮವಾರ, ಅಕ್ಟೋಬರ್ 25, 2021
24 °C

ಮಹಂತ ನರೇಂದ್ರ ಗಿರಿ ಸಾವಿನ ಕುರಿತು ಸಿಬಿಐ ತನಿಖೆಗೆ ಶಿವಸೇನಾ ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಖಿಲ ಭಾರತ ಅಖಾಡ ಪರಿಷತ್‌ನ ಅಧ್ಯಕ್ಷ ಮಹಂತ ನರೇಂದ್ರ ಗಿರಿ ಅವರ ನಿಗೂಢ ಸಾವಿನ ಕುರಿತು ಸಿಬಿಐ ತನಿಖೆ ನಡೆಸುವಂತೆ ಶಿವಸೇನಾ ನಾಯಕ ಸಂಜಯ್ ರಾವುತ್‌ ಆಗ್ರಹಿಸಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಹಾಂತ ಗಿರಿ ಸಾವಿನ ಕುರಿತು ಮಾತನಾಡಿದ ರಾವುತ್  ‘ಉತ್ತರ ಪ್ರದೇಶದಲ್ಲಿ ಹಿಂದುತ್ವದ ಕತ್ತು ಹಿಸುಕಲಾಗುತ್ತಿದೆ‘ ಎಂದು ಅಲ್ಲಿನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

‘ಮಹಂತ ಸ್ವಾಮೀಜಿ ಅವರ ಸಾವು ಆತ್ಮಹತ್ಯೆ ಎಂದು ಹೇಳುತ್ತಿದ್ದರೂ, ಇದೊಂದು ಕೊಲೆ ಎಂದು ಅವರ ಶಿಷ್ಯರು ಶಂಕಿಸಿದ್ದಾರೆ. ಹಾಗಾಗಿ ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ನಡೆದ ಸಾಧುಗಳ ಹತ್ಯೆ ಕುರಿತು ಎಂವಿಎ ಸರ್ಕಾರ ನಡೆಸಿದ ತನಿಖೆ ರೀತಿ, ಮಹಾಂತ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ನಡೆಸಬೇಕು‘ ಎಂದು ಸಂಜಯ್‌ ಒತ್ತಾಯಿಸಿದರು.

ಏಪ್ರಿಲ್ 16, 2020 ರಂದು, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆಯಲ್ಲಿ ಗುಂಪೊಂದು ಚಿಕ್ನೆ ಮಹಾರಾಜ್ ಕಲ್ಪವೃಕ್ಷಗಿರಿ (70) ಮತ್ತು ಸುಶೀಲ್‌ ಗಿರಿ ಮಹಾರಾಜ್ (35) ಮತ್ತು ಅವರ ಚಾಲಕ ನಿಲೇಶ್ ತೆಲ್ಗಡೆ (30) ಅವರನ್ನು ಹತ್ಯೆ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು