ಭಾನುವಾರ, ನವೆಂಬರ್ 1, 2020
19 °C

ರಾಹುಲ್ ಜತೆ ಉತ್ತರ ಪ್ರದೇಶ ಪೊಲೀಸರ ವರ್ತನೆ ಖಂಡಿಸಿದ ಶಿವಸೇನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಗುರುವಾರ ಹಾಥರಸ್‌ಗೆ ಹೊರಟಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯನ್ನು ತಡೆದು, ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸರ ನಡೆಯನ್ನು ಶಿವಸೇನಾ ಖಂಡಿಸಿದೆ. 

ಈ ವಿಚಾರವಾಗಿ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಶಿವಸೇನಾ ಮುಖಂಡ ಸಂಜಯ್‌ ರಾವತ್‌, 'ನಾವು ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ, ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕರಾಗಿದ್ದಾರೆ. ಅವರೊಂದಿಗೆ ಉತ್ತರ ಪ್ರದೇಶ ಪೊಲೀಸರು ನಡೆದುಕೊಂಡಿರುವ ರೀತಿಯನ್ನು ನಾವು ಎಂದಿಗೂ ಬೆಂಬಲಿಸುವುದಿಲ್ಲ. ಅವರ ಅಂಗಿಯ ಕೊಳಪಟ್ಟಿಯನ್ನು ಹಿಡಿದು, ನೆಲಕ್ಕೆ ತಳ್ಳಲಾಯಿತು. ಇದು ಒಂದು ರೀತಿಯಲ್ಲಿ ದೇಶದ ಪ್ರಜಾಪ್ರಭುತ್ವದ ಮೇಲೆ ನಡೆದ ಸಾಮೂಹಿಕ ದೌರ್ಜನ್ಯವಾಗಿದೆ,' ಎಂದು ರಾವತ್‌ ಕಿಡಿಕಾರಿದ್ದಾರೆ. 

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹಾಥರಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು. 

ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ  ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ...

ಉತ್ತರ ಪ್ರದೇಶ: ರಾಷ್ಟ್ರಪತಿ ಆಡಳಿತ ಹೇರಲು ವಕೀಲರ ಆಗ್ರಹ

ಹಾಥರಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಕುಟುಂಬವನ್ನು ಭೇಟಿಯಾಗದಂತೆ ಟಿಎಂಸಿಗೆ ತಡೆ ​

ಅತ್ಯಾಚಾರ ಖಂಡಿಸಿ ಸಮಾಜವಾದಿ ಪಕ್ಷದ ಕಾರ್ಯಕರ್ತರ ಪ್ರತಿಭಟನೆ: ಲಾಠಿ ಪ್ರಹಾರ‌ ​

ಹಾಥರಸ್‌ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಹರಿಹಾಯ್ದ ಅರವಿಂದ್‌ ಕೇಜ್ರಿವಾಲ್‌ ​

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು