ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಯನ್ ಬಂಧನ: ಎನ್‌ಸಿಬಿ ವಿರುದ್ಧ ‘ಸುಪ್ರೀಂ’ ಮೊರೆಹೊಕ್ಕ ಶಿವಸೇನಾ ಮುಖಂಡ

Last Updated 18 ಅಕ್ಟೋಬರ್ 2021, 13:15 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್ ನಟ ಶಾರುಕ್ ಖಾನ್ ಅವರ ಮಗ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿರುವುದಕ್ಕೆ ಸಂಬಂಧಿಸಿದಂತೆ ಮುಂಬೈನ ಎನ್‌ಸಿಬಿ ಹಾಗೂ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸುವಂತೆ ಶಿವಸೇನಾ ಮುಖಂಡ ಕಿಶೋರ್ ತಿವಾರಿ ಸುಪ್ರೀಂ ಕೋರ್ಟ್‌ಗೆ ಕೋರಿದ್ದಾರೆ.

ಮಾದಕ ವಸ್ತು ನಿಯಂತ್ರಣ ಅಪರಾಧ ಕಾಯ್ದೆ ಅಡಿ ದೂರು ದಾಖಲಾಗಿರುವ ಆರ್ಯನ್ ಅವರ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಸಲುವಾಗಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ (ಸ್ವಮೊಟೊ) ಅರ್ಜಿಯನ್ನು ದಾಖಲಿಸಿಕೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

‘ಕಳೆದ ಎರಡು ವರ್ಷಗಳಿಂದ ಚಲನಚಿತ್ರರಂಗದ ಆಯ್ದ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಮುಂಬೈನ ಎನ್‌ಸಿಬಿ ಮತ್ತು ಅದರ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಕುರಿತು ವಿಶೇಷ ನ್ಯಾಯಾಂಗ ತನಿಖೆ ನಡೆಸಲು ಕೋರ್ಟ್ ಆದೇಶಿಸಬೇಕೆಂದು ಕೋರುತ್ತೇನೆ’ ಎಂದು ಕಿಶೋರ್ ತಿವಾರಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT