ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಬಂಡಾಯ ಶಾಸಕರ ಅನರ್ಹತೆಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಶಿವಸೇನಾ ನಾಯಕ ಸಂಜತ್ ರಾವುತ್ ಹೇಳಿದ್ದಾರೆ.
‘12 ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅವರು ಹೇಳುವ ಸಂಖ್ಯೆಗಳು ಕೇವಲ ಲೆಕ್ಕಾಚಾರವಷ್ಟೆ. ಶಿವಸೇನಾ ದೊಡ್ಡ ಸಮುದ್ರ ಇದ್ದಂತೆ. ಇಂಥ ಅಲೆಗಳು ಬರುತ್ತವೆ, ಹೋಗುತ್ತವೆ’ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ (ಎಂವಿಎ)’ ಸರ್ಕಾರ ಉಳಿಸಲು ಪ್ರಯತ್ನಿಸಿದರೆ ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರನ್ನು ಮನೆಗೆ ಹೋಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವರೊಬ್ಬರು ಬೆದರಿಕೆಯೊಡ್ಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಇಂಥ ಹೇಳಿಕೆಯನ್ನು ಬೆಂಬಲಿಸುತ್ತಾರೆಯೇ ಎಂದು ರಾವುತ್ ಪ್ರಶ್ನಿಸಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.