ಸೋಮವಾರ, ಡಿಸೆಂಬರ್ 5, 2022
19 °C

ಶಿವಸೇನಾ ಮುಖಂಡ ಸುಧೀರ್ ಸೂರಿ ಅಂತ್ಯಕ್ರಿಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮೃತಸರ: ಹತ್ಯೆಗೀಡಾದ ಶಿವಸೇನಾ ಮುಖಂಡ ಸುಧೀರ್‌ ಸೂರಿ ಅವರ ಅಂತ್ಯಕ್ರಿಯೆಯು ಭಾನುವಾರ ಇಲ್ಲಿನ ದುರ್ಗಿಯಾನ ಶಿವಪುರಿ ಸ್ಮಶಾನದಲ್ಲಿ ನಡೆಯಿತು. ಈ ವೇಳೆ ನೂರಾರು ಜನರು ಭಾಗಿಯಾಗಿ, ಅಂತಿಮ ನಮನ ಸಲ್ಲಿಸಿದರು.

ಮಜಿಟಾ ರಸ್ತೆಯ ಗೋ‍ಪಾಲ ಮಂದಿರದ ಆಡಳಿತ ಮಂಡಳಿ ವಿರುದ್ಧ ಶುಕ್ರವಾರ ಪ್ರತಿಭಟಿಸುತ್ತಿದ್ದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಸೂರಿ ಮೃತಪಟ್ಟಿದ್ದರು.

ಅಂತ್ಯಸಂಸ್ಕಾರಕ್ಕೂ ಮುನ್ನ ಭಾರಿ ಪೊಲೀಸ್‌ ಭದ್ರತೆಯೊಂದಿಗೆ ಸೂರಿ ಅವರ ಪಾರ್ಥಿವ ಶರೀರವನ್ನು ಹೊತ್ತು ನಗರದ ವಿವಿಧ ಭಾಗಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಅಂತ್ಯಕ್ರಿಯೆ ವೇಳೆ ಪಂಜಾಬ್‌ ಮಾಜಿ ಉಪಮುಖ್ಯಮಂತ್ರಿ ಒ.ಪಿ.ಸೋನಿ ಮತ್ತು ದುರ್ಗಿಯಾನ ದೇಗುಲ ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಿ ಕಾಂತ ಚಾವ್ಲಾ ಭಾಗಿಯಾಗಿದ್ದರು.

ಪ್ರಕರಣ ಸಂಬಂಧ ಆರೋಪಿ ಸಂದೀಪ್‌ ಸಿಂಗ್‌ ಅಲಿಯಾಸ್‌ ಸುನ್ನಿಯನ್ನು (31) ಬಂಧಿಸಲಾಗಿದ್ದು, ಏಳು ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು