ಮುಂಬೈ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ, ಗೋವಾ ಚುನಾವಣೆಯಲ್ಲಿ ಶಿವಸೇನಾ ಸ್ಪರ್ಧಿಸಲಿದೆ ಎಂದು ಸಂಸದ ಸಂಜಯ್ ರಾವುತ್ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಉತ್ತರ ಪ್ರದೇಶ ವಿಧಾನಸಭೆಯ 403 ಕ್ಷೇತ್ರಗಳ ಪೈಕಿ 80ರಿಂದ 100 ಸ್ಥಾನಗಳಲ್ಲಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಗೋವಾದ 40 ಸ್ಥಾನಗಳ ಪೈಕಿ 20ರಲ್ಲಿ ಪಕ್ಷದ ಅಭ್ಯರ್ಥಿಗಳು ಸೆಣೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ರೈತ ಸಂಘಟನೆಗಳು ತಮ್ಮ ಪಕ್ಷವನ್ನು ಬೆಂಬಲಿಸಲು ಸಿದ್ಧ ಇವೆ. ಅಂತೆಯೇ ಕೆಲ ಸಣ್ಣ ಪಕ್ಷಗಳೊಂದಿಗೆ ನಾವು ಮೈತ್ರಿ ಮಾಡಿಕೊಳ್ಳಬಹುದು. ಗೋವಾದಲ್ಲಿ ಎಂ.ವಿ.ಎ ರೀತಿಯ ಕೂಟ ರಚಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.
ಶಿವಸೇನಾ ಪಕ್ಷವು ಈ ಎರಡೂ ರಾಜ್ಯಗಳಲ್ಲಿ ತನ್ನ ಕಾರ್ಯಕರ್ತರನ್ನು ಹೊಂದಿದೆ. ಯಶಸ್ಸು ಅಥವಾ ವೈಫಲ್ಯವನ್ನು ಲೆಕ್ಕಿಸದೆ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಅವರು ಪ್ರತಿಕ್ರಿಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.