ಗುರುವಾರ , ಆಗಸ್ಟ್ 18, 2022
25 °C

ಶಿವಸೇನಾ ಕಾರ್ಯಕರ್ತರಿಂದ ಬಂಡಾಯ ಶಾಸಕರ ವಿರುದ್ಧ ‘ಚಪ್ಪಲಿಯಿಂದ ಹೊಡಿಯಿರಿ’ ಅಭಿಯಾನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ‘ಮಹಾ ವಿಕಾಸ್ ಅಘಾಡಿ’ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಾಸಕರ ವಿರುದ್ಧ ಶಿವಸೇನಾ ಕಾರ್ಯಕರ್ತರು ‘ಚಪ್ಪಲಿಯಿಂದ ಹೊಡಿಯಿರಿ’ ಅಭಿಯಾನ ಆರಂಭಿಸಿದ್ದಾರೆ.

ಏಕನಾಥ ಶಿಂಧೆ ನೇತೃತ್ವದ ಬಂಡಾಯ ಶಾಸಕರ ವಿರುದ್ಧ ಮಹಾರಾಷ್ಟ್ರದ ವಿವಿಧೆಡೆಗಳಲ್ಲಿ ಶಿವಸೇನಾ ಕಾರ್ಯಕರ್ತರ ಪ್ರತಿಭಟನೆ ಮುಂದುವರಿದಿದೆ. ಪುಣೆಯಲ್ಲಿ ಭಾನುವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಬೆಂಬಲಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ ಕಾರ್ಯಕರ್ತರು, ಬಂಡಾಯ ಶಾಸಕರ ಚಿತ್ರಗಳಿಗೆ ಚಪ್ಪಲಿಯಿಂದ ಹೊಡೆದು ಪ್ರತಿಭಟಿಸಿದರು.

ಮತ್ತೊಂದೆಡೆ, ಶಿಂಧೆ ಬೆಂಬಲಿಗರು ಉದ್ಧವ್ ಠಾಕ್ರೆ ಪೋಸ್ಟರ್‌ಗಳಿಗೆ ಕಪ್ಪು ಬಣ್ಣ ಬಳಿದಿದ್ದಾರೆ.

ಈ ಮಧ್ಯೆ, ಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರ ‘ವೈ ಪ್ಲಸ್ (Y+)’ ಶ್ರೇಣಿಯ ಸಿಆರ್‌ಪಿಎಫ್‌ ಭದ್ರತೆ ಒದಗಿಸಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು