ಗುರುವಾರ , ಆಗಸ್ಟ್ 18, 2022
25 °C

ಉದ್ಧವ್‌ ಠಾಕ್ರೆ ಬೆಂಬಲಿಸಿ ದೆಹಲಿಯಲ್ಲಿ ಶಿವಸೇನಾ ಕಾರ್ಯಕರ್ತರ ಪ್ರತಿಭಟನೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಬೆಂಬಲಿಸಿ ಶಿವಸೇನಾ ಕಾರ್ಯಕರ್ತರು ಭಾನುವಾರ ಇಲ್ಲಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು. 

ಪಕ್ಷದ ನಗರ ಉಸ್ತುವಾರಿ ಮಂಗಲರಾಮ್ ಮುಂಡೆ ನೇತೃತ್ವದಲ್ಲಿ ಶಿವಸೇನಾ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. 

‘ಬಂಡಾಯ ಶಾಸಕರಿಗೆ ಭಯಪಡುವುದಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ನಾವು ಹಿಂದೆ ಸರಿಯುವುದಿಲ್ಲ’ ಎಂದು ಶಿವಸೇನಾ ದೆಹಲಿ ನಗರ ಘಟಕವು ಹೇಳಿಕೆ ನೀಡಿದೆ.

‘ಪಕ್ಷವನ್ನು ದುರ್ಬಲಗೊಳಿಸುತ್ತಿರುವವರು ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಆದರ್ಶಗಳನ್ನು ಅನುಸರಿಸುವವರಲ್ಲ’ ಎಂದು ಅದು ತಿಳಿಸಿದೆ. 

ಸಚಿವ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನಾದ ಕನಿಷ್ಠ 38 ಶಾಸಕರು ಮತ್ತು 10 ಪಕ್ಷೇತರರು ಅಸ್ಸಾಂನ ಗುವಾಹಟಿಯ ಹೋಟೆಲ್‌ವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಅವರು ಉದ್ಧವ್‌ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದಾರೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು