ಸೋಮವಾರ, ಮಾರ್ಚ್ 1, 2021
28 °C

ಶಿವಮೊಗ್ಗ ಸ್ಫೋಟ ಪ್ರಕರಣ: ತನಿಖೆಗೆ ರಾಹುಲ್ ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಶಿವಮೊಗ್ಗದ ಕಲ್ಲು ಗಣಿಕಾರಿಕೆ ಕ್ವಾರಿಯಲ್ಲಿ ಸಂಭವಿಸಿರುವ ಸ್ಫೋಟ ಬಹುದೊಡ್ಡ ದುರಂತವಾಗಿದ್ದು, ಈ ಪ್ರಕರಣವನ್ನು ಆಳವಾದ ತನಿಖೆಗೆ ಒಳಪಡಿಸಬೇಕು. ಈ ಮೂಲಕ ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ, ಘಟನೆಯಲ್ಲಿ ಮೃತಪಟ್ಟವಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ: 

‘ಇಂಥ ಘಟನೆಗಳು ಬಗ್ಗೆ ಆಳವಾದ ತನಿಖೆ ನಡೆಯಬೇಕು. ಇದರಿಂದ ಭವಿಷ್ಯದಲ್ಲಿ ಇಂಥ ಘಟನೆಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಬಹುದು‘ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ರಾತ್ರಿ 10.30ರ ಸಮಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಒಂದು ಟ್ರಕ್‌ ಲೋಡ್‌ನಷ್ಟು ಸ್ಫೋಟಕ ಸಾಮಗ್ರಿಗಳು ಸ್ಫೋಟಗೊಂಡು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಲು ಗಣಿಗಾರಿಕೆಗಾಗಿಯೇ ಈ ಸ್ಫೋಟಕ ಸಾಮಗ್ರಿಯನ್ನು ಸಂಗ್ರಹಿಸಿಡಲಾಗಿತ್ತು ಎಂದು ಶಂಕಿಸಲಾಗಿದೆ.
ಈ ಸ್ಫೋಟದ ತೀವ್ರತೆಯ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲದೇ, ಪಕ್ಕದ ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಹಳ್ಳಿಗಳಲ್ಲೂ ಕಾಣಿಸಿಕೊಂಡಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು