ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್, ಜಿಇಇ ಪರೀಕ್ಷೆ: ಮಧ್ಯಪ್ರದೇಶ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ

Last Updated 31 ಆಗಸ್ಟ್ 2020, 1:39 IST
ಅಕ್ಷರ ಗಾತ್ರ

ಭೋಪಾಲ್‌: ರಾಜ್ಯದಲ್ಲಿನೀಟ್‌ ಹಾಗೂ ಜೆಇಇ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದುಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ಈ ಸೌಲಭ್ಯವನ್ನು ಬಳಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳು ಆಗಸ್ಟ್‌ 31ರೊಳಗೆ 181 ಸಂಖ್ಯೆಗೆ ಕರೆ ಮಾಡಿ ಅಥವಾhttps://mapit.gov.in/covid-19/ ವೆಬ್‌ಸೈಟ್‌ ಮೂಲಕಹೆಸರು ನೊಂದಾಯಿಸಿಕೊಳ್ಳಬೇಕಾಗಿದೆ.

ಈ ಬಗ್ಗೆ ಚೌಹಾಣ್‌ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲ ಛತ್ತೀಸಗಡ ಮತ್ತು ಒಡಿಶಾ ಮುಖ್ಯಮಂತ್ರಿಗಳು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪಲು ನೆರವಾಗುವಂತೆ ಅಧಿಕಾರಿಗಳು ಹಾಗೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದರು.

ಕ್ಷೇತ್ರ ಅಥವಾ ಜಿಲ್ಲಾ ಕೇಂದ್ರದಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕೇಂದ್ರ ಸರ್ಕಾರವು ಉಚಿತವಾಗಿ ವಾಹನ ವ್ಯವಸ್ಥೆ ಮಾಡಲಿದೆ.

ಕೋವಿಡ್‌–19 ಪರಿಸ್ಥಿತಿ ನಡುವೆ ಪರೀಕ್ಷೆಗಳನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭವಿಷ್ಯವು ನಮ್ಮ ಮೊದಲ ಆದ್ಯತೆಯಾಗಿದೆ. ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವುದರೊಂದಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದುಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ಗುರುವಾರ ಹೇಳಿದ್ದರು. ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT