ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತಬ್ಧಚಿತ್ರ ತಿರಸ್ಕಾರ ಆಘಾತ ತಂದಿದೆ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

Last Updated 16 ಜನವರಿ 2022, 14:52 IST
ಅಕ್ಷರ ಗಾತ್ರ

ಕೋಲ್ಕತ್ತ: ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳನ್ನು ಬಿಂಬಿಸುವ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರವನ್ನು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಿಂದ ಹೊರಗಿಟ್ಟಿರುವ ಕೇಂದ್ರ ಸರ್ಕಾರದ ನಡೆಆಘಾತ ತಂದಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಪತ್ರ ಬರೆದಿರುವ ಮಮತಾ, ‘ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಜನರಿಗೆ ನೋವುಂಟಾಗಿದೆ. ಈ ಬಗ್ಗೆ ಮರುಪರಿಶೀಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಯಾವುದೇ ಕಾರಣ ಹೇಳದೆ ಸ್ತಬ್ಧಚಿತ್ರವನ್ನು ತಿರಸ್ಕರಿಸಿರುವುದು ದಿಗ್ಭ್ರಮೆಗೊಳಿಸುವ ಸಂಗತಿಯಾಗಿದೆ‘ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸ್ತಬ್ಧಚಿತ್ರವು ನೇತಾಜಿ ಸುಭಾಷ್‌ ಚಂದ್ರ ಬೋಸ್ ಅವರ 125ನೇ ಜನ್ಮ ದಿನದ ವರ್ಷದಲ್ಲಿ ಅವರ ಐಎನ್‌ಎಯ ಕೊಡುಗೆಗಳನ್ನು ಸ್ಮರಿಸುವ ಉದ್ದೇಶ ಹೊಂದಿತ್ತು ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT