ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾ ಒಲಿಂಪಿಕ್ಸ್‌ಗೆ ನಡೆಯದ ಆಯ್ಕೆ: ಅರ್ಜಿ ವಿಚಾರಣೆಗಾಗಿ ಸುಪ್ರೀಂಗೆ ಮನವಿ

Last Updated 2 ಆಗಸ್ಟ್ 2021, 8:46 IST
ಅಕ್ಷರ ಗಾತ್ರ

ನವದೆಹಲಿ: ಟೋಕಿಯೊ ಪ್ಯಾರಾ ಒಲಿಂಪಿಕ್ಸ್‌ಗೆ ತಮ್ಮನ್ನು ಆಯ್ಕೆ ಮಾಡದಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕು ಎಂದು ಐದು ಬಾರಿ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿರುವ ಶೂಟರ್‌ ನರೇಶ್ ಕುಮಾರ್ ಶರ್ಮಾ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ನರೇಶ್‌ ಕುಮಾರ್ ಅವರ ಪರ ಹಿರಿಯ ವಕೀಲ ವಿಕಾಸ್‌ ಸಿಂಗ್‌ ಅವರು, ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠದ ಎದುರು ತಮ್ಮ ವಾದ ಮಂಡಿಸಿದರು. ಈ ವಾದವನ್ನು ನ್ಯಾಯಪೀಠ ಗಮನಿಸಿತು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ನರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಆಗಸ್ಟ್‌ 6ಕ್ಕೆ ಮುಂದೂಡಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

‘ವಿಳಂಬವಾಗಿ ಅರ್ಜಿ ವಿಚಾರಣೆ ನಡೆಸಿದರೆ, ಅರ್ಜಿದಾರರ ಉದ್ದೇಶವೇ ನಿಷ್ಪ್ರಯೋಜಕವಾಗುತ್ತದೆ‘ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT