ಸೋಮವಾರ, ಅಕ್ಟೋಬರ್ 18, 2021
25 °C

ದೆಹಲಿಯ ರೋಹಿಣಿ ಕೋರ್ಟ್‌ ಆವರಣದಲ್ಲಿ ಶೂಟೌಟ್: ಗ್ಯಾಂಗ್‌ಸ್ಟರ್ ಸೇರಿ ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರೋಹಿಣಿ ಕೋರ್ಟ್‌ ಆವರಣದಲ್ಲಿ ಶುಕ್ರವಾರ ಶೂಟೌಟ್ ನಡೆದಿದೆ. ವಕೀಲರ ಉಡುಪಿನಲ್ಲಿ ಬಂದಿದ್ದ ಗ್ಯಾಂಗ್‌ಸ್ಟರ್‌ಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗ್ಯಾಂಗ್‌ಸ್ಟರ್‌ ಜಿತೇಂದ್ರ ಗೋಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ಯಾಂಗ್‌ಸ್ಟರ್ ಜಿತೇಂದರ್ ಗೋಗಿ ಅವರನ್ನು ಗುರಿಯಾಗಿಸಿಕೊಂಡು ಗುಂಪೊಂದು ಈ ದಾಳಿ ನಡೆಸಿದೆ. ಶೂಟೌಟ್‌ನಲ್ಲಿ ಗೋಗಿ ಸಾವಿಗೀಡಾಗಿದ್ದಾನೆ.   

ವಕೀಲರ ಉಡುಪು ಧರಿಸಿ ಬಂದು ದಾಳಿ ಆರಂಭಿಸಿದ ದುಷ್ಕರ್ಮಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.‌

ದರೋಡೆಕೋರ ಗೋಗಿಯನ್ನು ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಆತನ ಮೇಲೆ ಇಬ್ಬರು ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಪೊಲೀಸರೂ ದಾಳಿ ನಡೆಸಿದ್ದಾರೆ.  ಘಟನೆಯಲ್ಲಿ ಗೋಗಿ ಮತ್ತು ಇಬ್ಬರು ದಾಳಿಕೋರರು ಮೃತಪಟ್ಟಿದ್ದಾರೆ. ಅದರಲ್ಲಿ ಒಬ್ಬಾತ ಹಲವು ಪ್ರಕರಣಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ಹಿಡಿದುಕೊಟ್ಟರಿಗೆ ₹50 ಸಾವಿರ ಬಹುಮಾನ ಘೋಷಣೆಯಾಗಿತ್ತು ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ಥಾನಾ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು