ನ್ಯಾಯಾಧೀಶರ ಹುದ್ದೆಗೆ ಅರ್ಹರ ಕೊರತೆ: ಸುಪ್ರೀಂ ಕೋರ್ಟ್ ಬೇಸರ

ನವದೆಹಲಿ: ದೇಶದಾದ್ಯಂತ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಪರ್ಯಾಯ ವ್ಯವಸ್ಥೆ ಮೂಲಕ (ಲ್ಯಾಟರಲ್ ಎಂಟ್ರಿ) ನೇಮಕಾತಿ ಮಾಡಿಕೊಳ್ಳುವುದಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಅರ್ಹ ವಕೀಲರು ಲಭ್ಯರಾಗದೆ ಇರುವುದಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ.
ಕನಿಷ್ಠ ಏಳು ವರ್ಷಗಳ ಅನುಭವ ಹೊಂದಿರುವ ವಕೀಲರು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಉನ್ನತ ನ್ಯಾಯಾಂಗ ಸೇವೆಗಳಿಗೆ ಲ್ಯಾಟರಲ್‌ಗೆ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಬಹುದು.
ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ ಉನ್ನತ ನ್ಯಾಯಾಂಗ ಸೇವೆಗಳ (ಎಚ್‌ಜೆಎಸ್) ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳ ಅರ್ಜಿಯ ವಿಚಾರಣೆ ನಡೆಸಿತು. ಅರ್ಜಿ ಪುರಸ್ಕರಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಜೆ. ಬಿ. ಪಾರ್ದಿವಾಲಾ ಪೀಠ, ‘ರಾಜಸ್ಥಾನ ಹೈಕೋರ್ಟ್‌ಗೆ ತೆರಳಲು ಅರ್ಜಿದಾರರಿಗೆ ಮುಕ್ತ ಅವಕಾಶ ನೀಡುತ್ತೇವೆ. ಅಂತಹ ಅರ್ಜಿ ಸಲ್ಲಿಸಿದರೆ ಪೀಠ ರಚಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಕೋರುತ್ತೇವೆ’ ಎಂದು ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.