ಶನಿವಾರ, ಜೂನ್ 19, 2021
27 °C

ಒಂದೆರಡು ತಿಂಗಳಲ್ಲಿ ಲಸಿಕೆ ಕೊರತೆ ಇರಲ್ಲ: ಡಾ.ಎನ್‌ಕೆ ಆರೋರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: 18 ವರ್ಷ ಮೇಲ್ಪಟ್ಟವರಿಗೂ ಕೋವಿಡ್‌ ಲಸಿಕೆ ವಿಸ್ತರಣೆ ಮಾಡಿದ್ದರಿಂದ ಲಸಿಕೆಯ ಕೊರತೆ ಉಂಟಾಯಿತು ಎಂದು ಕೋವಿಟ್‌ ಲಸಿಕೆ ಕೇಂದ್ರ ಸಮಿತಿಯ ಸದಸ್ಯ ಡಾ.ಎನ್‌ಕೆ ಅರೋರ ತಿಳಿಸಿದ್ದಾರೆ.

ಮುಂದಿನ ಎರಡು ತಿಂಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿ ಎನ್‌ಡಿಟಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದರು.

ಮೊದಲು ಘೋಷಣೆ ಮಾಡಿದಂತೆ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ನಾವು ಮುಂದುವರೆಸಬೇಕಿತ್ತು ಆದರೆ  18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ವಿಸ್ತರಣೆ ಮಾಡಿದ್ದರಿಂದ ಕೊರತೆಯಾಯಿತು ಎಂದು ಅವರು ಹೇಳಿದ್ದಾರೆ.

ಸ್ಥಳೀಯವಾಗಿ ಲಸಿಕೆ ಉತ್ಪಾದನೆಯನ್ನು ಹೆಚ್ಚಳ ಮಾಡಲಾಗಿದೆ. ವಿದೇಶಗಳಿಂದಲೂ ಲಸಿಕೆ ಆಮದು ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಿರುವುದರಿಂದ ಒಂದೆರಡು ತಿಂಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು